ADVERTISEMENT

ಪಂಜಾಬ್‌ ಕಾಂಗ್ರೆಸ್‌ ಬಿಕ್ಕಟ್ಟು: ಸೋನಿಯಾ ಗಾಂಧಿ ಭೇಟಿಯಾದ ನವಜೋತ್‌ ಸಿಂಗ್‌ ಸಿಧು

ಪಿಟಿಐ
Published 16 ಜುಲೈ 2021, 19:32 IST
Last Updated 16 ಜುಲೈ 2021, 19:32 IST
ನವದೆಹಲಿಯಲ್ಲಿ ಶುಕ್ರವಾರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಲು, ಅವರ ನಿವಾಸಕ್ಕೆ ಬಂದ ಪಂಜಾಬ್‌ನ ಕಾಂಗ್ರೆಸ್‌ ಮುಖಂಡ ನವಜೋತ್ ಸಿಂಗ್ ಸಿಧು
ನವದೆಹಲಿಯಲ್ಲಿ ಶುಕ್ರವಾರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಲು, ಅವರ ನಿವಾಸಕ್ಕೆ ಬಂದ ಪಂಜಾಬ್‌ನ ಕಾಂಗ್ರೆಸ್‌ ಮುಖಂಡ ನವಜೋತ್ ಸಿಂಗ್ ಸಿಧು   

ನವದೆಹಲಿ: ಪಂಜಾಬ್‌ ಕಾಂಗ್ರೆಸ್‌ನಲ್ಲಿ ಆಂತರಿಕ ಬಿಕ್ಕಟ್ಟು ಮುಂದುವರಿದಿದ್ದು, ಈ ನಡುವೆ ಮಾಜಿ ಸಚಿವ ನವಜೋತ್‌ ಸಿಂಗ್‌ ಸಿಧು ಶುಕ್ರವಾರ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಇಲ್ಲಿ ಭೇಟಿಯಾಗಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಪಂಜಾಬ್‌ನಲ್ಲಿನ ಕಾಂಗ್ರೆಸ್‌ ಪಕ್ಷದ ಉಸ್ತುವಾರಿ ಹರೀಶ್ ರಾವತ್‌ ಅವರೂ ಈ ಸಂದರ್ಭದಲ್ಲಿ ಹಾಜರಿದ್ದರು ಎಂದು ಮೂಲಗಳು ತಿಳಿಸಿವೆ.

ಮೂಲಗಳ ಪ್ರಕಾರ, ಪಂಜಾಬ್‌ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರು ಸಿಧು ಅವರಿಗೆ ಪಕ್ಷದಲ್ಲಿ ಪ್ರಮುಖ ಹುದ್ದೆ ನೀಡುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

ADVERTISEMENT

ಆದರೆ, ಈ ವರದಿಯನ್ನು ನಿರಾಕರಿಸಿರುವ ಹರೀಶ್ ರಾವತ್‌, ಮುಂದಿನ ವರ್ಷ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಸಿಂಗ್ ಮತ್ತು ಸಿಧು ಒಟ್ಟಾಗಿ ಕೆಲಸ ಮಾಡುವಂತಹ ’ಸೂತ್ರ’ವೊಂದನ್ನು ಪಕ್ಷದ ಹೈಕಮಾಂಡ್‌ ರೂಪಿಸುತ್ತಿದೆ’ ಎಂದು ಸಮರ್ಥಿಸಿಕೊಂಡಿದ್ದಾರೆ.

ಈ ಬೆಳವಣಿಗೆಗಳ ನಡುವೆ ಇಬ್ಬರೂ ನಾಯಕರು ಪರಸ್ಪರ ಜಗಳವಾಡುತ್ತಿದ್ದಾರೆ. ಸಾರ್ವಜನಿಕ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಮತ್ತೊಂದು ಕಡೆ ಇಬ್ಬರು ನಾಯಕರು ಚಂಡಿಗಡದಲ್ಲಿ ಪ್ರತ್ಯೇಕವಾಗಿ ಪಕ್ಷದ ತಮ್ಮ ಆಪ್ತ ಕಾರ್ಯಕರ್ತರೊಂದಿಗೆ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.