ಚಂಡೀಗಡ: ಕಾಂಗ್ರೆಸ್‌ನ ಪಂಜಾಬ್ ಘಟಕದ ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ಬುಧವಾರ ರಾಜೀನಾಮೆ ನೀಡಿದ್ದಾರೆ.
‘ಕಾಂಗ್ರೆಸ್ ಅಧ್ಯಕ್ಷರು ಬಯಸಿದಂತೆ ನಾನು ರಾಜೀನಾಮೆ ನೀಡಿದ್ದೇನೆ’ ಎಂದು ಸಿಧು ಟ್ವೀಟ್ ಮಾಡಿದ್ದಾರೆ. ಜತೆಗೆ ರಾಜೀನಾಮೆ ಪತ್ರದ ಪ್ರತಿಯನ್ನೂ ಪೋಸ್ಟ್ ಮಾಡಿದ್ದಾರೆ.
ರಾಜೀನಾಮೆ ನೀಡುವಂತೆ ಉತ್ತರ ಪ್ರದೇಶ, ಗೋವಾ, ಉತ್ತರಾಖಂಡ, ಮಣಿಪುರ ಹಾಗೂ ಪಂಜಾಬ್ ಘಟಕಗಳ ಅಧ್ಯಕ್ಷರಿಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸೂಚಿಸಿದ್ದರು. ವಿಧಾನಸಭಾ ಚುನಾವಣೆಗಳಲ್ಲಿ ಪಕ್ಷದ ಹೀನಾಯ ಸೋಲಿನ ಬಳಿಕ ಸೋನಿಯಾ ಈ ನಿರ್ಧಾರ ಕೈಗೊಂಡಿದ್ದರು.
ಪಕ್ಷದ ಪ್ರಾದೇಶಿಕ ಸಮಿತಿಗಳಮರುಸಂಘಟನೆಗೆ ಅನುಕೂಲವಾಗುವಂತೆ ಸೋನಿಯಾ ಗಾಂಧಿ ಈ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಪಕ್ಷದ ರಾಷ್ಟ್ರೀಯ ವಕ್ತಾರ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.