ADVERTISEMENT

ರಾಹುಲ್ ಗಾಂಧಿ ಭೇಟಿ ಬಳಿಕ ರಾಜೀನಾಮೆ ಹಿಂಪಡೆಯಲು ಸಿಧು ನಿರ್ಧಾರ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 15 ಅಕ್ಟೋಬರ್ 2021, 16:49 IST
Last Updated 15 ಅಕ್ಟೋಬರ್ 2021, 16:49 IST
   

ನವದೆಹಲಿ: ಪಂಜಾಬ್ ಮುಖ್ಯಮಂತ್ರಿಯಾಗಿ ಚರಣ್‌ಜಿತ್ ಸಿಂಗ್ ಆಯ್ಕೆ ಬಳಿಕ ಪಂಜಾಬ್ ಕಾಂಗ್ರೆಸ್ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ನವಜೋತ್ ಸಿಂಗ್ ಸಿಧು ಇದೀಗ ತಮ್ಮ ರಾಜೀನಾಮೆ ಹಿಂಪಡೆದಿದ್ದಾರೆ.

ಇಂದು ಸಂಜೆ ದೆಹಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಭೇಟಿಯಾದ ಸಿಧು, ಎಲ್ಲ ವಿಷಯಗಳನ್ನು ರಾಹುಲ್ ಗಾಂಧಿ ಗಮನಕ್ಕೆ ತಂದಿರುವೆ. ಸಮಸ್ಯೆ ಬಗೆಹರಿದಿದೆ ಎಂದು ಹೇಳಿದ್ದಾರೆ.

‘ಸಿಧು ತಮ್ಮ ಕಳವಳವನ್ನು ರಾಹುಲ್ ಗಾಂಧಿ ಬಳಿ ಹೇಳಿಕೊಂಡಿದ್ದಾರೆ. ಅದನ್ನು ಪರಿಹರಿಸಲು ನಾವು ಪ್ರಯತ್ನಿಸುತ್ತೇವೆ. ರಾಜೀನಾಮೆ ಹಿಂಪಡೆದು ಪಂಜಾಬ್ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿ ಮುಂದುವರಿಯುವುದಾಗಿ ಸಿಧು ತಿಳಿಸಿದ್ದಾರೆ’ ಎಂದು ಪಂಜಾಬ್ ಕಾಂಗ್ರೆಸ್ ಉಸ್ತುವಾರಿ ಹರೀಶ್ ರಾವತ್ ಹೇಳಿರುವುದಾಗಿ ಎಎನ್ಐ ಟ್ವೀಟ್ ಮಾಡಿದೆ.

ADVERTISEMENT

'ರಾಜಿಯ ಕಾರಣಗಳಿಂದಾಗಿ ವ್ಯಕ್ತಿಯೊಬ್ಬನ ವ್ಯಕ್ತಿತ್ವದಲ್ಲಿ ಕುಸಿತ ಉಂಟಾಗುತ್ತದೆ. ನಾನು ಪಂಜಾಬ್‌ನ ಭವಿಷ್ಯ ಮತ್ತು ಪಂಜಾಬ್‌ನ ಕಲ್ಯಾಣದಲ್ಲಿ ಯಾವುದೇ ಕಾರಣಕ್ಕೂ ರಾಜಿಯಾಗುವುದಿಲ್ಲ.ಹೀಗಾಗಿ, ಪಂಜಾಬ್‌ ಪ್ರದೇಶ ಕಾಂಗ್ರೆಸ್‌ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸುತ್ತಿದ್ದೇನೆ. ಕಾಂಗ್ರೆಸ್‌ ಪಕ್ಷಕ್ಕೆ ನನ್ನ ಸೇವೆ ಮುಂದುವರಿಯಲಿದೆ' ಎಂದು ರಾಜೀನಾಮೆ ಪತ್ರದಲ್ಲಿ ಸಿಧು ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.