ನವದೆಹಲಿ: ಲಂಚಕ್ಕೆ ಪ್ರತಿಯಾಗಿ ‘ಸಬ್‌ಮರಿನ್ ಪ್ರಾಜೆಕ್ಟ್’ವೊಂದಕ್ಕೆ ಸಂಬಂಧಿಸಿದ ಗೌಪ್ಯ ಮಾಹಿತಿಯನ್ನು ಸೋರಿಕೆ ಮಾಡಿರುವ ಆರೋಪಗಳ ಮೇಲೆ ನೌಕಾಪಡೆಯಕಮಾಂಡರ್ ಶ್ರೇಣಿಯ ಅಧಿಕಾರಿ ಸೇರಿದಂತೆ ಐವರನ್ನು ಸಿಬಿಐ ಬಂಧಿಸಿದೆ ಎಂದು ಅಧಿಕಾರಿಗಳು ಮಂಗಳವಾರ ಹೇಳಿದ್ದಾರೆ.
ಬಂಧಿತರಲ್ಲಿ ನೌಕಾಪಡೆಯ ಇಬ್ಬರು ನಿವೃತ್ತ ಸಿಬ್ಬಂದಿಯೂ ಇದ್ದು, ಆರೋಪಿಗಳ ವಿರುದ್ಧ ಐಪಿಸಿ ಹಾಗೂ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿ, ದೆಹಲಿ, ಮುಂಬೈ, ಹೈದರಾಬಾದ್ ಹಾಗೂ ವಿಶಾಖಪಟ್ಟಣ ನಗರಗಳಲ್ಲಿಸಿಬಿಐ ಈ ವರೆಗೆ 16 ಸ್ಥಳಗಳಲ್ಲಿ ಶೋಧ ನಡೆಸಿದೆ ಎಂದೂ ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.