ADVERTISEMENT

ಮುಸ್ಲಿಂ ಎನ್ನುವ ಕಾರಣಕ್ಕಾಗಿ ದಾವೂದ್ ಜತೆಗೆ ನವಾಬ್ ನಂಟು: ಶರದ್ ಪವಾರ್ ಕಿಡಿ

ಪಿಟಿಐ
Published 5 ಮಾರ್ಚ್ 2022, 14:50 IST
Last Updated 5 ಮಾರ್ಚ್ 2022, 14:50 IST
ನವಾಬ್ ಮಲಿಕ್
ನವಾಬ್ ಮಲಿಕ್   

ಪುಣೆ: ‘ಮಹಾರಾಷ್ಟ್ರದ ಸಚಿವ ನವಾಬ್ ಮಲಿಕ್ ಅವರ ಬಂಧನವು ರಾಜಕೀಯ ಪ್ರೇರಿತವಾದದ್ದು, ಅವರು ಮುಸ್ಲಿಂ ಎನ್ನುವ ಕಾರಣಕ್ಕಾಗಿಯೇ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಅವರೊಂದಿಗೆ ನಂಟು ಹೊಂದಿದ್ದಾರೆಂದು ಆರೋಪಿಸಲಾಗುತ್ತಿದೆ’ ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಶನಿವಾರ ಹೇಳಿದ್ದಾರೆ.

ನವಾಬ್ ಮಲಿಕ್ ರಾಜೀನಾಮೆ ನೀಡಬೇಕೆಂಬ ಪ್ರತಿಪಕ್ಷಗಳ ಒತ್ತಾಯವನ್ನು ತಳ್ಳಿ ಹಾಕಿದ ಅವರು, ‘ಮುಸ್ಲಿಂ ಎನ್ನುವ ಕಾರಣಕ್ಕಾಗಿಯೇ ಮಲಿಕ್ ಮತ್ತು ಅವರ ಕುಟುಂಬದ ಸದಸ್ಯರಿಗೆ ಉದ್ದೇಶಪೂರ್ವಕವಾಗಿ ಕಿರುಕುಳ ನೀಡಲಾಗುತ್ತಿದೆ. ಆದರೆ ಇದರ ವಿರುದ್ಧ ನಾವು ಹೋರಾಡುತ್ತೇವೆ’ ಎಂದರು.

‘ಮಲಿಕ್ ಅವರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಪ್ರತಿಪಕ್ಷ ಬಿಜೆಪಿ ಆಗ್ರಹಿಸುತ್ತಿದೆಯೆಲ್ಲ’ ಎನ್ನುವ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ, ‘ಬಿಜೆಪಿಗೆ ಸೇರಿದ ಕೇಂದ್ರ ಸಚಿವ ನಾರಾಯಣ ರಾಣೆ ಮತ್ತು ಮಲಿಕ್‌ ಬಗ್ಗೆ ವಿಭಿನ್ನ ಮಾನದಂಡಗಳನ್ನು ಅನ್ವಯಿಸಲಾಗುತ್ತಿದೆ’ ಎಂದು ಶರದ್ ಉತ್ತರಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.