ಬೊಕಾರೊ: ಜಾರ್ಖಂಡ್‌ನ ಬೊಕಾರೊ ಜಿಲ್ಲೆಯಲ್ಲಿ ಬುಧವಾರ ಭದ್ರತಾ ಸಿಬ್ಬಂದಿ ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ. ಘಟನೆಯಲ್ಲಿ ಸಿಆರ್‌ಪಿಎಫ್‌ನ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಜತೆಗೆ ಒಬ್ಬ ನಕ್ಸಲ್‌ನನ್ನು ಹೊಡೆದುರುಳಿಸಲಾಗಿದೆ.
ಮೃತಪಟ್ಟಿರುವ ನಕ್ಸಲನನ್ನು ಕುನ್ವಾರ್ ಮಾಂಝಿ ಎಂದು ಗುರುತಿಸಲಾಗಿದೆ. ಈತನ ಬಗ್ಗೆ ಸುಳಿವು ನೀಡಿದವರಿಗೆ ₹5 ಲಕ್ಷ ಬಹುಮಾನವನ್ನು ಸರ್ಕಾರ ಈ ಹಿಂದೆ ಘೋಷಿಸಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಗುಂಡಿನ ಚಕಮಕಿ ವೇಳೆ ಒಬ್ಬ ನಾಗರಿಕ ಕೂಡ ಮೃತಪಟ್ಟಿದ್ದಾರೆ.
ಬಿರ್ಹೋರ್ ಡೇರಾ ಅರಣ್ಯ ಪ್ರದೇಶದಲ್ಲಿ ನಕ್ಸಲರು ಅಡಗಿರುವ ಬಗ್ಗೆ ಗುಪ್ತಚರ ಮಾಹಿತಿಗಳಿದ್ದ ಕಾರಣ ಸಿಆರ್‌ಪಿಎಫ್ ತಂಡ ಹಾಗೂ ಜಿಲ್ಲಾ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ಗುಂಡಿನ ಚಿಕಮಕಿ ನಡೆದಿದೆ, ಘಟನಾ ಸ್ಥಳದಿಂದ ಎಕೆ–47 ರೈಫಲ್‌ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಶೋಧ ಕಾರ್ಯ ಮುಂದುವರಿದಿದೆ ಎಂದು ಡಿಜಿಪಿ ಅನುರಾಗ್ ಗುಪ್ತಾ ಹೇಳಿದ್ದಾರೆ.
ಹುತಾತ್ಮರಾದ ಯೋಧನನ್ನು ಅಸ್ಸಾಂನ ನಿವಾಸಿ ಪರ್ಮೇಶ್ವರ್ ಕೊಚ್ ಎಂದು ಗುರುತಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.