ADVERTISEMENT

ಮಹಾರಾಷ್ಟ್ರ: ಇಬ್ಬರು ಮಹಿಳಾ ನಕ್ಸಲರ ಎನ್‌ಕೌಂಟರ್

ಪಿಟಿಐ
Published 17 ಸೆಪ್ಟೆಂಬರ್ 2025, 9:59 IST
Last Updated 17 ಸೆಪ್ಟೆಂಬರ್ 2025, 9:59 IST
<div class="paragraphs"><p>  ನಕ್ಸಲರ ವಿರುದ್ಧ ಕಾರ್ಯಾಚರಣೆ</p></div>

ನಕ್ಸಲರ ವಿರುದ್ಧ ಕಾರ್ಯಾಚರಣೆ

   

(ಸಂಗ್ರಹ ಚಿತ್ರ)

ಗಡ್ಚಿರೋಲಿ: ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ಇಬ್ಬರು ಮಹಿಳಾ ನ‌ಕ್ಸಲರನ್ನು ಎನ್‌ಕೌಂಟರ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಇತಪಲ್ಲಿ ತಾಲೂಕಿನ ಗ್ರಾಮವೊಂದರ ಅರಣ್ಯದಲ್ಲಿ ನಕ್ಸಲರ ಚಲನವಲನಗಳ ಬಗ್ಗೆ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ಕೈಗೊಳ್ಳಲಾಯಿತು. ಗಡ್ಚಿರೋಲಿ ಪೊಲೀಸ್‌ ಇಲಾಖೆಯಲ್ಲಿರುವ ವಿಶೇಷ ನಕ್ಸಲ್ ವಿರೋಧಿ ಕಮಾಂಡೋಗಳ ತಂಡ ಮತ್ತು ಸಿ–60ನ ಐದು ತಂಡಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದವು. ಸಿಆರ್‌ಪಿಎಫ್‌ ತಂಡ ಹೊರವಲಯದಿಂದ ಕಾರ್ಯಾಚರಣೆಗೆ ನಿರ್ದೇಶನ ನೀಡಿತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸಿ–60 ತಂಡ ಅರಣ್ಯದೊಳಗೆ ಪ್ರವೇಶಿಸುತ್ತಿದ್ದಂತೆ ನಕ್ಸಲರು ಗುಂಡಿನ ದಾಳಿ ನಡೆಸಿದ್ದಾರೆ. ಇದಕ್ಕೆ ಪ್ರತಿಯಾಗಿ ಪೊಲೀಸರು ದಾಳಿ ನಡೆಸಿದ್ದಾರೆ. ನಂತರ ನಡೆಸಿದ ಶೋಧದ ವೇಳೆ ಇಬ್ಬರು ಮಹಿಳಾ ನಕ್ಸಲರ ಮೃತದೇಹ ಪತ್ತೆಯಾಗಿದೆ.

ಮೃತದೇಹದ ಬಳಿ ಎಕೆ–47 ಗನ್‌, ಪಿಸ್ತೂಲ್‌ಗಳು, ಜೀವಂತ ಗುಂಡುಗಳು, ನಕ್ಸಲ್‌ ಸಾಹಿತ್ಯಗಳು ಸೇರಿ ಹಲವು ವಸ್ತುಗಳು ಪತ್ತೆಯಾಗಿದ್ದು, ವಶಕ್ಕೆ ಪಡೆಯಲಾಗಿದೆ. ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.