ರಾಯಪುರ: ಛತ್ತೀಸಗಡ ಬಿಜಾಪುರ್ ಜಲ್ಲೆಯಲ್ಲಿ ಶುಕ್ರವಾರ ಭದ್ರತಾ ಪಡೆಗಳ ಜೊತೆಗೆ ನಡೆದ ಗುಂಡಿನ ಚಕಮಕಿಯಲ್ಲಿ ನಕ್ಸಲ್ ಒಬ್ಬ ಹತನಾಗಿದ್ದಾನೆ. ಕೊರ್ಸಗುಡ ಅರಣ್ಯ ಭಾಗದಲ್ಲಿ ಗುಂಡಿನ ಚಕಮಕಿ ನಡೆದಿದೆ.
ಕೇಂದ್ರ ಮೀಸಲು ಪಡೆ ಮತ್ತು ಸ್ಥಳೀಯ ಪೊಲೀಸರಿದ್ದ ಜಂಟಿ ಕಾರ್ಯಪಡೆಯು ಈ ಭಾಗದಲ್ಲಿ ಕಾರ್ಯಾಚರಣೆ ಕೈಗೊಂಡಿತ್ತು. ಸುತ್ತುವರಿದಿದ್ದ ಪೊಲೀಸರ ಮೇಲೆ ನಕ್ಸಲರು ಗುಂಡಿನ ದಾಳಿ ನಡೆಸಿದ್ದು, ಪೊಲೀಸರು ಪ್ರತಿದಾಳಿ ನಡೆಸಿದರು ಎಂದು ಐಜಿಪಿ ಸುಂದರರಾಜ್ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.