ಸುಕ್ಮಾ (ಪಿಟಿಐ): ಛತ್ತೀಸಗಢದ ಸುಕ್ಮಾ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿ ಮತ್ತು ನಕ್ಸಲರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ನಕ್ಸಲ್ ಹತನಾಗಿದ್ದಾನೆ. ಈ ವೇಳೆ ನಡೆದ ಕಚ್ಚಾ ಬಾಂಬ್ ಸ್ಫೋಟದಲ್ಲಿ ಮೂವರು ಭದ್ರತಾ ಸಿಬ್ಬಂದಿಗೆ ಗಾಯಗಳಾಗಿವೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.
ವಿಶೇಷ ಕಾರ್ಯಪಡೆ (ಎಸ್‌ಟಿಎಫ್), ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ) ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆಗಳು (ಸಿಆರ್‌ಪಿಎಫ್) ಜಂಟಿಯಾಗಿ ಸೋಮವಾರದಿಂದ ನಕ್ಸಲ್ ವಿರೋಧಿ ಕಾರ್ಯಾಚರಣೆ ಹಮ್ಮಿಕೊಂಡಿದ್ದವು. ಸುಕ್ಮಾ ಮತ್ತು ದಂತೇವಾಡ ಜಿಲ್ಲೆಗಳ ಗಡಿ ಭಾಗದಲ್ಲಿ ಭದ್ರತಾ ಸಿಬ್ಬಂದಿ ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ.
ಎನ್‌ಕೌಂಟರ್ ನಡೆದ ಸ್ಥಳದಲ್ಲಿ ಒಬ್ಬ ವ್ಯಕ್ತಿಯ ಮೃತದೇಹ ಮತ್ತು ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಮದ್ದು ಗುಂಡುಗಳು ಮತ್ತು ಸ್ಫೋಟಕಗಳನ್ನು ವಶಕ್ಕೆ ಪಡೆದಿರುವುದಾಗಿ ಸುಕ್ಮಾ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಕಿರಣ್ ಚವಾಣ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.