ರಾಂಚಿ: ಜಾರ್ಖಂಡ್‌ನಲ್ಲಿ ನಡೆದ ನಕ್ಸಲ್ ವಿರೋಧಿ ಕಾರ್ಯಾಚರಣೆಯ ಸಂದರ್ಭದಲ್ಲಿ ಸಿಡಿಲು ಬಡಿದು ಸಿಆರ್‌ಪಿಎಫ್ ಅಧಿಕಾರಿಯೊಬ್ಬರು ಮೃತಪಟ್ಟಿದ್ದು, ಮತ್ತೊಬ್ಬ ಅಧಿಕಾರಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ ಕೆರಿಬುರು ಗ್ರಾಮದಲ್ಲಿ ಗುರುವಾರ ರಾತ್ರಿ 10.30 ರ ಸುಮಾರಿಗೆ ಈ ಘಟನೆ ನಡೆದಿದೆ. ಅರಣ್ಯ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
26ನೇ ಬೆಟಾಲಿಯನ್‌ಗೆ ಸೇರಿದ ಎರಡನೇ ಕಮಾಂಡ್ ಶ್ರೇಣಿಯ ಅಧಿಕಾರಿ ಎಂ.ಪ್ರಭೋ ಸಿಂಗ್ ಮೃತ ಅಧಿಕಾರಿ. ಇವರು ಮಣಿಪುರದ ಪಶ್ಚಿಮ ಇಂಫಾಲ್ ಜಿಲ್ಲೆಯವರಾಗಿದ್ದಾರೆ.
ನಕ್ಸಲ್ ವಿರೋಧಿ ಕಾರ್ಯಾಚರಣೆಗಾಗಿ ಅರಣ್ಯ ಪ್ರದೇಶದಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಅಧಿಕಾರಿಗಳು ಗಸ್ತು ತಿರುಗುತ್ತಿದ್ದರು ಎಂದು ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.