ಹೈದರಾಬಾದ್: ದೇಶದಲ್ಲಿ ಕೇವಲ ಐದಾರು ಪ್ರದೇಶಗಳಿಗೆ ನಕ್ಸಲ್ ಚಟುವಟಿಕೆ ಸೀಮಿತವಾಗಿವೆ. ಮುಂದಿನ ವರ್ಷ ಮಾರ್ಚ್ 31ರೊಳಗೆ ಭಾರತವನ್ನು ನಕ್ಸಲ್ ಮುಕ್ತ ದೇಶವನ್ನಾಗಿ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶುಕ್ರವಾರ ತಿಳಿಸಿದ್ದಾರೆ.
ಸ್ವಾತಂತ್ರ್ಯ ಹೋರಾಟಗಾರ ಅಲ್ಲೂರಿ ಸೀತಾರಾಮ ರಾಜು ಅವರ 128ನೇ ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ನಕ್ಸಲ್ ತಾಣಗಳು ಶಿಕ್ಷಣ ತಾಣಗಳಾಗಿ ಬದಲಾಗುತ್ತಿವೆ’ ಎಂದು ಹೇಳಿದರು.
‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯನ್ನು ಉಲ್ಲೇಖಿಸಿದ ಅವರು, ಪಾಕಿಸ್ತಾನದ ಭಯೋತ್ಪಾದಕರ ನೆಲೆಗಳನ್ನು ಮಾತ್ರ ಗುರಿಯಾಗಿಸಿ ದಾಳಿ ಮಾಡಲಾಗಿದೆ. ನಾಗರಿಕರು ಮತ್ತು ಸೇನಾ ನೆಲೆಗಳ ಮೇಲೆ ದಾಳಿ ಮಾಡಿಲ್ಲ. ಭವಿಷ್ಯದಲ್ಲಿ ಪಹಲ್ಗಾಮ್ ಉಗ್ರರ ದಾಳಿಯಂತಹ ಘಟನೆಗಳು ನಡೆದರೆ ಭಯೋತ್ಪಾದಕರಿಗೆ ತಕ್ಕ ಪ್ರತ್ಯುತ್ತರ ನೀಡಲಾಗುವುದು’ ಎಂದು ಹೇಳಿದರು.
ಅಲ್ಲೂರಿ ಸೀತಾರಾಮ ರಾಜು ಅವರು ವೀರ ಯೋಧ, ದೇಶಕ್ಕಾಗಿ ಅವರ ಸೇವೆ ಅಪಾರ ಎಂದು ಅವರು ಶ್ಲಾಘಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.