ಲಖನೌ: ‘ಭಾರತವು 2026ರ ಮಾರ್ಚ್ 31ರ ವೇಳೆಗೆ ಸಂಪೂರ್ಣ ನಕ್ಸಲ್ ಮುಕ್ತವಾಗಲಿದೆ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಪುನರುಚ್ಚರಿಸಿದರು.
ಹೊಸದಾಗಿ ನೇಮಕಗೊಂಡ ನಾಗರಿಕ ಪೊಲೀಸ್ ಕಾನ್‌ಸ್ಟೆಬಲ್‌ಗಳಿಗೆ ನೇಮಕಾತಿ ಪತ್ರ ವಿತರಿಸಿ ಮಾತನಾಡಿದ ಅವರು, ‘ಪ್ರಧಾನಿ ನರೇಂದ್ರ ಮೋದಿ ಅವರ 11 ವರ್ಷಗಳ ಆಡಳಿತದಲ್ಲಿ ದೇಶದ ಭದ್ರತೆಗೆ ಹೆಚ್ಚಿನ ಮಹತ್ವ ನೀಡಲಾಗಿದೆ. ಬಿಗಿ ಕ್ರಮಗಳಿಂದ 11 ರಾಜ್ಯಗಳಲ್ಲಿ ಹರಡಿಕೊಂಡಿದ್ದ ನಕ್ಸಲ್ ಚಟುವಟಿಕೆಯು ಈಗ ಮೂರು ಜಿಲ್ಲೆಗಳಿಗೆ ಸೀಮಿತಗೊಂಡಿದೆ. ಇನ್ನೊಂದು ವರ್ಷದಲ್ಲಿ ದೇಶವು ಸಂಪೂರ್ಣ ನಕ್ಸಲ್ ಮುಕ್ತವಾಗಲಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.