ADVERTISEMENT

ಛತ್ತೀಸಗಢ: ಎನ್‌ಕೌಂಟರ್‌ನಲ್ಲಿ 12 ನಕ್ಸಲರನ್ನು ಹೊಡೆದುರುಳಿಸಿದ ಭದ್ರತಾ ಪಡೆ

​ಪ್ರಜಾವಾಣಿ ವಾರ್ತೆ
Published 3 ಜನವರಿ 2026, 6:39 IST
Last Updated 3 ಜನವರಿ 2026, 6:39 IST
<div class="paragraphs"><p> ಭದ್ರತಾ ಪಡೆ ( ಸಂಗ್ರಹ ಚಿತ್ರ)</p></div>

ಭದ್ರತಾ ಪಡೆ ( ಸಂಗ್ರಹ ಚಿತ್ರ)

   

ಸುಕ್ಮಾ/ಬಿಜಾಪುರ: ಛತ್ತೀಸಗಢದ ಬಸ್ತಾರ್ ವಲಯದ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಭದ್ರತಾ ಪಡೆಗಳು 12ಕ್ಕೂ ಹೆಚ್ಚು ಮಂದಿ ನಕ್ಸಲರನ್ನು ಹೊಡೆದುರುಳಿಸಿವೆ.

ಸುಕ್ಮಾದಲ್ಲಿ 10ಕ್ಕೂ ಹೆಚ್ಚು ನಕ್ಸಲರನ್ನು ಎನ್‌ಕೌಂಟರ್‌ನಲ್ಲಿ ಕೊಲ್ಲಲಾಗಿದ್ದು, ಪಕ್ಕದ ಬಿಜಾಪುರ ಜಿಲ್ಲೆಯಲ್ಲಿ ಇಬ್ಬರು ಹತರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಸುಕ್ಮಾ ಜಿಲ್ಲೆಯ ದಕ್ಷಿಣ ಭಾಗದ ಕಾಡಿನಲ್ಲಿ ಗುಂಡಿನ ಚಕಮಕಿ ನಡೆದಿದ್ದು, ಅಲ್ಲಿ ಭದ್ರತಾ ಸಿಬ್ಬಂದಿಯ ತಂಡವು ನಕ್ಸಲ್ ನಿಗ್ರಹ ಕಾರ್ಯಾಚರಣೆಗೆ ಹೊರಟಿತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದುವರೆಗೆ ಇಲ್ಲಿ 10ಕ್ಕೂ ಹೆಚ್ಚು ನಕ್ಸಲರನ್ನು ಹೊಡೆದುರುಳಿಸಲಾಗಿದೆ. ಕಾರ್ಯಾಚರಣೆ ಇನ್ನೂ ನಡೆಯುತ್ತಿದ್ದು, ಹೆಚ್ಚಿನ ವಿವರಗಳನ್ನು ನಂತರ ಹಂಚಿಕೊಳ್ಳಲಾಗುವುದುಎಂದು ಅವರು ಹೇಳಿದ್ದಾರೆ.

ಬಿಜಾಪುರಜಿಲ್ಲೆಯ ದಕ್ಷಿಣದ ಕಾಡಿನಲ್ಲಿ ಗುಂಡಿನ ಚಕಮಕಿ ನಡೆದಿದ್ದು, ರಾಜ್ಯ ಪೊಲೀಸ್‌ನ ಒಂದು ಘಟಕವಾದ ಜಿಲ್ಲಾ ಮೀಸಲು ಗಾರ್ಡ್‌ನ ತಂಡವು ಬೆಳಿಗ್ಗೆ 5ಗಂಟೆ ಸುಮಾರಿಗೆ ನಕ್ಸಲ್ ನಿಗ್ರಹ ಕಾರ್ಯಾಚರಣೆಗೆ ಹೊರಟಿತ್ತು ಎಂದು ಮತ್ತೊಬ್ಬ ಅಧಿಕಾರಿ ತಿಳಿಸಿದ್ದಾರೆ.

ಇಬ್ಬರು ನಕ್ಸಲರ ಮೃತದೇಹಗಳನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ಗುಂಡಿನ ಚಕಮಕಿ ಇನ್ನೂ ನಡೆಯುತ್ತಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ ಎಂದು ಅಧಿಕಾರಿ ಹೇಳಿದರು.

ಕಳೆದ ವರ್ಷ ಛತ್ತೀಸ್ಗಢದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ 285 ನಕ್ಸಲರು ಹತರಾಗಿದ್ದಾರೆ.