ADVERTISEMENT

ಛತ್ತೀಸಗಢ: ಭದ್ರತಾ ಪಡೆಯ ಎನ್‌ಕೌಂಟರ್‌ನಲ್ಲಿ ನಕ್ಸಲ್ ಹತ

ಪಿಟಿಐ
Published 3 ಫೆಬ್ರುವರಿ 2025, 10:12 IST
Last Updated 3 ಫೆಬ್ರುವರಿ 2025, 10:12 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಕಂಕೇರ್: ಛತ್ತೀಸಗಢದ ಕಂಕೇರ್‌ ಜಿಲ್ಲೆಯಲ್ಲಿ ಭದ್ರತಾ ಪಡೆ ನಡೆಸಿದ ಎನ್‌ಕೌಂಟರ್‌ನಲ್ಲಿ ಒಬ್ಬ ನಕ್ಸಲ್ ಹತನಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಂಕೇರ್‌ ಮತ್ತು ನಾರಾಯಣಪುರ ಜಿಲ್ಲೆಗಳ ಗಡಿಯಲ್ಲಿರುವ ಕಾಡಿನಲ್ಲಿ ಭಾನುವಾರ ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸಲಾಯಿತು. ಈ ವೇಳೆ ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಹೇಳಿದ್ದಾರೆ.

ADVERTISEMENT

ಮಾವೋವಾದಿಗಳ ಉತ್ತರ ಬಸ್ತಾರ್‌ ಮತ್ತು ಮಾದ್‌ ವಿಭಾಗಗಳಿಗೆ ಸೇರಿದ ಕಾರ್ಯಕರ್ತರು ಅಡಗಿರುವ ಕುರಿತು ನಿಖರ ಮಾಹಿತಿ ಮೇರೆಗೆ ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ) ಮತ್ತು ಗಡಿ ಭದ್ರತಾ ಪಡೆ (ಬಿಎಸ್‌ಎಫ್‌) ಜಂಟಿ ಕಾರ್ಯಾಚರಣೆ ನಡೆಸಿತು ಎಂದು ಅವರು ತಿಳಿಸಿದ್ದಾರೆ.

ಎನ್‌ಕೌಂಟರ್‌ನಲ್ಲಿ ಒಬ್ಬ ನಕ್ಸಲ್ ಹತನಾಗಿದ್ದಾನೆ. ಪೊಲೀಸರು ಸ್ಥಳದಿಂದ ಮೃತದೇಹ ಮತ್ತು ಬಂದೂಕನ್ನು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.