ADVERTISEMENT

ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್: ಒಬ್ಬ ನಕ್ಸಲ್ ಹತ್ಯೆ

ಪಿಟಿಐ
Published 4 ಫೆಬ್ರುವರಿ 2024, 12:44 IST
Last Updated 4 ಫೆಬ್ರುವರಿ 2024, 12:44 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ರಾಯಿಪುರ: ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಭಾನುವಾರ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ನಕ್ಸಲ್ ಹತನಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೇಜಿ ಪೊಲೀಸ್ ಠಾಣಾ ವ್ಯಾಪ್ತಿಯ ನಗರಂ ಮತ್ತು ಪಂತಬೇಜಿ ಗ್ರಾಮಗಳ ನಡುವಿನ ಅರಣ್ಯ ಪ್ರದೇಶದಲ್ಲಿ ವಿವಿಧ ಭದ್ರತಾ ಪಡೆಗಳು ಜಂಟಿಯಾಗಿ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದವು. ಈ ವೇಳೆ ಗುಂಡಿನ ಚಕಮಕಿ ನಡೆದಿದೆ ಎಂದು ಮಾಹಿತಿ ನೀಡಿದ್ದಾರೆ.

ADVERTISEMENT

ಕೊಂಟ ಪ್ರದೇಶ ಸಮಿತಿ ಸದಸ್ಯರಾದ ಸೋಧಿ ಗಜೇಂದ್ರ ಮತ್ತು ಇತರೆ 15ರಿಂದ 20ರಷ್ಟು ಮಾವೋವಾದಿ ಸದಸ್ಯರ ಇರುವಿಕೆಯ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಲಾಗಿತ್ತು.

ಸ್ಥಳದಿಂದ 12 ಬೋರ್ ರೈಫಲ್, ಪಿಸ್ತೂಲ್ ಮತ್ತು ಮಾವೋವಾದಿಗಳಿಗೆ ಸಂಬಂಧಪಟ್ಟ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹತನಾದ ನಕ್ಸಲ್ ಗುರುತು ಪತ್ತೆಯಾಗಿಲ್ಲ. ಹತ್ತಿರದ ಪ್ರದೇಶದಲ್ಲೂ ಶೋಧ ಮುಂದುವರಿದಿದೆ.

ಜಿಲ್ಲಾ ಮೀಸಲು ರಕ್ಷಣಾ ಪಡೆ (ಡಿಆರ್‌ಜಿ), ಬಸ್ತಾರ್ ಫೈಟರ್ಸ್, ಪೊಲೀಸರು, ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.