ADVERTISEMENT

ಜಾರ್ಖಂಡ್‌: ಭದ್ರತಾ ದಳದ ಗುಂಡೇಟಿಗೆ ನಕ್ಸಲ್‌ ಸಾವು

ಪಿಟಿಐ
Published 4 ಮೇ 2022, 11:15 IST
Last Updated 4 ಮೇ 2022, 11:15 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಖುಂಟಿ: ಜಾರ್ಖಂಡ್‌ನ ಖುಂಟಿ ಜಿಲ್ಲೆಯಲ್ಲಿ ಬುಧವಾರ ಬೆಳಿಗ್ಗೆ ಭದ್ರತಾ ಪಡೆಗಳೊಂದಿಗಿನ ಗುಂಡಿನ ಚಕಮಕಿಯಲ್ಲಿ ನಕ್ಸಲೀಯರೊಬ್ಬರು ಹತರಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಪಹಾನ್‌ ವಿರುದ್ಧ 40 ಪ್ರಕರಣಗಳು ದಾಖಲಾಗಿವೆ. 2012ರಿಂದ ಜೈಲಿನಲ್ಲಿದ್ದ ಪಹಾನ್‌ 2020ರಲ್ಲಿ ಬಿಡುಗಡೆಯಾಗಿ ಮತ್ತೆ ತನ್ನ ಅಪರಾಧ ಕೃತ್ಯಗಳನ್ನು ಮುಂದುವರೆಸಿದ್ದ ಎಂದು ಹೇಳಿದರು.

ನಿಷೇಧಿತ ಸಂಘಟನೆ ಪೀಪಲ್ಸ್ ಲಿಬರೇಶನ್ ಫ್ರಂಟ್ ಆಫ್ ಇಂಡಿಯಾದ (ಪಿಎಲ್‌ಎಫ್‌ಐ) ದಕ್ಷಿಣ ಛೋಟಾನಾಗ್‌ಪುರ ಪ್ರಾದೇಶಿಕ ಸಮಿತಿಯ ಕಾರ್ಯದರ್ಶಿ ಲಕಾ ಪಹಾನ್ ಅವರನ್ನು ಮುರ್ಹು ಪೊಲೀಸ್ ಠಾಣೆ ವ್ಯಾಪ್ತಿಯ ಕೋಟಾ ಇಂಡಿಪಿಡಿ ಅರಣ್ಯದಲ್ಲಿ ಹತ್ಯೆ ಮಾಡಲಾಗಿದೆ ಎಂದು ಅವರು ಹೇಳಿದರು.

ADVERTISEMENT

ಜಿಲ್ಲಾ ಸಶಸ್ತ್ರ ಪೊಲೀಸ್ ಮತ್ತು ವಿಶೇಷ ಆಕ್ರಮಣ ತಂಡ (ಎಸ್‌ಎಟಿ) ಪ್ರದೇಶದಲ್ಲಿ ನಕ್ಸಲ್‌ ನಿಗ್ರಹ ಕಾರ್ಯಾಚರಣೆ ಕೈಗೊಂಡಿದ್ದ ವೇಳೆ ಪಹಾನ್‌ ನೇತೃತ್ವದ ನಕ್ಸಲ್‌ ಗುಂಪು ಗುಂಡಿನ ದಾಳಿ ನಡೆಸಿದೆ. ಆತ್ಮರಕ್ಷಣೆಗಾಗಿ ಪೊಲೀಸರ ತಂಡ ಪ್ರತಿದಾಳಿ ನಡೆಸಿದೆ ಎಂದು ಪೊಲೀಸ್‌ ವರಿಷ್ಠಾಧಿಕಾರಿ ಅಮನ್‌ ಕುಮಾರ್ ಪಿಟಿಐಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.