ADVERTISEMENT

ಛತ್ತೀಸಘಢ: ನಕ್ಸಲ್‌ ಹತ್ಯೆ

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2025, 14:23 IST
Last Updated 19 ಡಿಸೆಂಬರ್ 2025, 14:23 IST
<div class="paragraphs"><p> ಭದ್ರತಾ ಪಡೆ ಯೋಧರು– ಪಿಟಿಐ ಚಿತ್ರ&nbsp;</p></div>

ಭದ್ರತಾ ಪಡೆ ಯೋಧರು– ಪಿಟಿಐ ಚಿತ್ರ 

   

ಬಿಜಾಪುರ (ಪಿಟಿಐ): ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿ ಮತ್ತು ನಕ್ಸಲರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ನಕ್ಸಲ್‌ ಮೃತಪಟ್ಟಿದ್ದಾನೆ.

ಮೃತನನ್ನು ಫಗ್ನು ಮಾದ್ವಿ (35) ಎಂದು ಗುರುತಿಸಲಾಗಿದ್ದು, ಈತನ ಸುಳಿವು ನೀಡಿದವರಿಗೆ ₹5 ಲಕ್ಷ ಬಹುಮಾನವನ್ನು ಘೋಷಿಸಲಾಗಿತ್ತು. 

ADVERTISEMENT

ಭೈರಾಮಗಢ ಪೊಲೀಸ್‌ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ನಕ್ಸಲರು ಇರುವ ಬಗ್ಗೆ ಮಾಹಿತಿ ದೊರೆತ ಕಾರಣ ಜಿಲ್ಲಾ ಮೀಸಲು ಪಡೆ ಸಿಬ್ಬಂದಿ ಶುಕ್ರವಾರ ಬೆಳಿಗ್ಗೆ ನಕ್ಸಲ್ ನಿಗ್ರಹ ಕಾರ್ಯಾಚರಣೆಗೆ ಮುಂದಾಗಿದ್ದಾರೆ. 

ಘಟನಾ ಸ್ಥಳದಿಂದ .303 ರೈಫಲ್‌, 9 ಎಂಎಂ ಪಿಸ್ತೂಲ್‌, ಕೆಲವು ಸ್ಫೋಟಕಗಳು ಹಾಗೂ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.