ADVERTISEMENT

ಛತ್ತೀಸ್‌ಗಢ: ಇಬ್ಬರು ಅತಿಥಿ ಶಿಕ್ಷಕರನ್ನು ಹತ್ಯೆ ಮಾಡಿದ ನಕ್ಸಲರು

ಪಿಟಿಐ
Published 15 ಜುಲೈ 2025, 14:05 IST
Last Updated 15 ಜುಲೈ 2025, 14:05 IST
   

ಬಿಜಾಪುರ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಇಬ್ಬರು ಅತಿಥಿ ಶಿಕ್ಷಕರನ್ನು ನಕ್ಸಲರು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರನ್ನು ವಿನೋದ್ ಮಾಡೆ (28) ಹಾಗೂ ಸುರೇಶ್ ಮೆಟ್ಟಾ (29) ಎಂದು ಗುರುತಿಸಲಾಗಿದೆ. ನಿನ್ನೆ ಮತ್ತು ಇಂದು (ಮಂಗಳವಾರ) ಈ ಹತ್ಯೆ ಮಾಡಲಾಗಿದೆ. 

ಪ್ರಾಥಮಿಕ ಮಾಹಿತಿಯ ಪ್ರಕಾರ ಮೃತ ಶಿಕ್ಷಕರು ಪೊಲೀಸ್ ಮಾಹಿತಿದಾರರು ಎಂದು ಶಂಕಿಸಿ ನಕ್ಸಲರು ಹತ್ಯೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. 

ADVERTISEMENT

ಈ ಘಟನೆ ಫರ್ಸೆಗಢ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. 

ಬಿಜಾಪುರ ಸೇರಿದಂತೆ ಬಸ್ತರ್‌ ಪ್ರದೇಶದಲ್ಲಿ ಕಳೆದ ಐದು ತಿಂಗಳಲ್ಲಿ 25 ಜನರು ನಕ್ಸಲರಿಂದ ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.