ಬಿಜಾಪುರ: ಛತ್ತೀಸ್‌ಗಢ ರಾಜ್ಯದ ಬಿಜಾಪುರ ಜಿಲ್ಲೆಯ ಹಳ್ಳಿಯೊಂದರಲ್ಲಿ ಇಬ್ಬರು ವ್ಯಕ್ತಿಗಳನ್ನು ನಕ್ಸಲರು ಮಂಗಳವಾರ ಹತ್ಯೆ ಮಾಡಿದ್ದಾರೆ.
ಇಲ್ಲಿನ ತರ್ರೆಮ್ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದೆ.
ಮೃತರನ್ನು ರಾಜು (32) ಮತ್ತು ಮುನ್ನಾ (27) ಎಂದು ಗುರುತಿಸಲಾಗಿದೆ. ಕತ್ತು ಕೊಯ್ದು ಇವರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪೊಲೀಸರಿಗೆ ಮಾಹಿತಿ ನೀಡುತ್ತಿದ್ದರು ಎಂದು ಶಂಕಿಸಿ ಇವರನ್ನು ಹತ್ಯೆ ಮಾಡಲಾಗಿದೆ ಎಂದು ಗ್ರಾಮಸ್ಥರು ಪೊಲೀಸರಿಗೆ ತಿಳಿಸಿದ್ದಾರೆ. ಈ ಭಾಗದಲ್ಲಿ ಪೊಲೀಸರು ನಕ್ಸಲರ ವಿರುದ್ಧ ಕಾರ್ಯಾಚರಣೆ ಮುಂದುವರಿಸಿದ್ದಾರೆ.
ಜನವರಿ 16 ಹಾಗೂ 26ರಂದು ಪೊಲೀಸ್ ಮಾಹಿತಿದಾರರೆಂಬ ಶಂಕೆಯ ಮೇಲೆ ಇಬ್ಬರನ್ನು ನಕ್ಸಲರು ಹತ್ಯೆ ಮಾಡಿದ್ದರು. ಕಳೆದ ವರ್ಷ ಬಿಜಾಪುರ ಸೇರಿದಂತೆ ಏಳು ಜಿಲ್ಲೆಗಳನ್ನು ಒಳಗೊಂಡ ಬಸ್ತಾರ್ ಪ್ರದೇಶದಲ್ಲಿ 68 ನಾಗರಿಕರನ್ನು ಹತ್ಯೆ ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.