ನಕ್ಸಲರ ಹತ್ಯೆ (ಸಾಂಕೇತಿಕ ಚಿತ್ರ)
ಮುಂಬೈ: ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ಸೋಮವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಐವರು ನಕ್ಸಲರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಛತ್ತೀಸ್‌ಗಢದ ನಾರಾಯಣಪುರ ಗಡಿಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ಗುಂಡಿನ ಕಾಳಗ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.
ಗಡ್ಚಿರೋಲಿ ಜಿಲ್ಲೆಯ ಸ್ಥಳೀಯ ಪೊಲೀಸರು, C60 ಕಮಾಂಡೊ ಪಡೆ ಹಾಗೂ ಸಿಆರ್‌ಪಿಎಫ್ ತಂಡವು ಜಂಟಿ ಕಾರ್ಯಾಚರಣೆ ನಡೆಸಿದ್ದವು ಎಂದು ಅವರು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.