ನಕ್ಸಲರು (ಪ್ರಾತಿನಿಧಿಕ ಚಿತ್ರ)
ರಾಂಚಿ(ಜಾರ್ಖಂಡ್): ಜಾರ್ಖಂಡ್‌ನ ಬೊಕಾರೊ ಜಿಲ್ಲೆಯಲ್ಲಿ ಸಿಆರ್‌ಪಿಎಫ್‌ನ ಕೋಬ್ರಾ ಪಡೆ ಜೊತೆಗಿನ ಗುಂಡಿನ ಕಾಳಗದಲ್ಲಿ 8 ನಕ್ಸಲರು ಹತರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜಿಲ್ಲೆಯ ಲಾಲ್ ಪಾನಿಯಾ ಪ್ರದೇಶದ ಲುಗು ಹಿಕ್ಸ್‌ನಲ್ಲಿ ಬೆಳಗ್ಗೆ 5.30ರ ಸುಮಾರಿಗೆ ಈ ಚಕಮಕಿ ನಡೆದಿದೆ.
209 ಕಮಾಂಡೊ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್(ಕೋಬ್ರಾ) ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ನಾಲ್ವರು ನಕ್ಸಲರು ಹತರಾದರು ಮತ್ತು ಒಂದು ಐಎನ್‌ಎಸ್‌ಎಎಸ್ ರೈಫಲ್ ಹಾಗೂ ಒಂದು ಸೆಲ್ಫ್ ಲೋಡಿಂಗ್ ರೈಫಲ್ ಅನ್ನು ವಶಪಡಿಸಿಕೊಳ್ಳಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೋಬ್ರಾ ಪಡೆ ಮತ್ತು ನಕ್ಸಲರ ನಡುವೆ ಇನ್ನೂ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.
ಕೋಬ್ರಾ, ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ನ ವಿಶೇಷ ಅರಣ್ಯ ಘಟಕವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.