ADVERTISEMENT

ದ್ವೇಷ ಭಾಷಣಕ್ಕಾಗಿ ಯುಎಪಿಎ ಅಡಿಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ನಾಯಕನ ಬಂಧನ

ಪಿಟಿಐ
Published 16 ಫೆಬ್ರುವರಿ 2021, 8:33 IST
Last Updated 16 ಫೆಬ್ರುವರಿ 2021, 8:33 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಶ್ರೀನಗರ: ಕಳೆದ ವರ್ಷ ಬಂಡಿಪೋರಾದಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಮಂಡಳಿ ಚುನಾವಣೆಯ ವೇಳೆ ನಡೆದ ರ‍್ಯಾಲಿಯಲ್ಲಿ 'ದ್ವೇಷ ಭಾಷಣ' ಮಾಡಿದ ಆರೋಪದ ಮೇಲೆ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ನಾಯಕ ಹಿಲಾಲ್ ಲೋನೆ ಅವರನ್ನು ಕಾನೂನುಬಾಹಿರ ಚಟುವಟಿಕೆ ತಡೆ ಕಾಯ್ದೆಯಡಿ (ಯುಎಪಿಎ) ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ಎನ್‌ಸಿ ಸಂಸತ್ ಸದಸ್ಯ ಮೊಹಮ್ಮದ್ ಅಕ್ಬರ್ ಲೋನೆ ಅವರ ಪುತ್ರ ಹಿಲಾಲ್ ಲೋನೆ ಅವರನ್ನು ಸೋಮವಾರ ಇಲ್ಲಿನ ಶಾಸಕರ ಹಾಸ್ಟೆಲ್‌ನಿಂದ ಬಂಧಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಉತ್ತರ ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಹಾಜಿನ್‌ನಲ್ಲಿರುವ ಪೊಲೀಸ್ ಠಾಣೆಯಲ್ಲಿ ದಾಖಲಾದ ಎಫ್‌ಐಆರ್‌ನಲ್ಲಿ ಯುಎಪಿಎಯ ವಿವಿಧ ವಿಭಾಗಗಳ ಅಡಿಯಲ್ಲಿ ಆತನ ವಿರುದ್ಧ ಪ್ರಕರಣ ದಾಖಲಾಗಿತ್ತು.

ADVERTISEMENT

ಹಾಜಿನ್‌ನಲ್ಲಿ ನಡೆದ ಡಿಡಿಸಿ ಚುನಾವಣೆಯಲ್ಲಿ ಪ್ರಚಾರದ ವೇಳೆ ಸಾರ್ವಜನಿಕ ರ‍್ಯಾಲಿಯಲ್ಲಿ ಅವರು ಮಾಡಿದ ಭಾಷಣಕ್ಕೆ ಈ ಪ್ರಕರಣ ಸಂಬಂಧಿಸಿದೆ ಎಂದು ಅಧಿಕಾರಿ ಹೇಳಿದ್ದಾರೆ. ಕಳೆದ ವರ್ಷ ಡಿಸೆಂಬರ್ 25 ರಂದು ಅವರನ್ನು ಬಂಡೀಪೋರಾದ ಸುಂಬಲ್ ಪ್ರದೇಶದಲ್ಲಿ ಬಂಧಿಸಿ ನಂತರ ಶಾಸಕರ ಹಾಸ್ಟೆಲ್‌ಗೆ ಸ್ಥಳಾಂತರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.