ಮುಂಬೈ: ಡ್ರಗ್ಸ್ ಪ್ರಕರಣದಲ್ಲಿ ಬಾಲಿವುಡ್ ನಟ ಅರ್ಮಾನ್ ಕೊಹ್ಲಿ ಅವರನ್ನು ರಾಷ್ಟ್ರೀಯ ಮಾದಕ ವಸ್ತು ನಿಯಂತ್ರಣ ದಳ (ಎನ್‌ಸಿಬಿ) ಭಾನುವಾರ ಬಂಧಿಸಿದೆ.
ಕೊಹ್ಲಿ ಅವರನ್ನು ಎನ್‌ಸಿಬಿ ನ್ಯಾಯಾಲಯಕ್ಕೆ ಹಾಜರುಪಡಿಸಲಿದೆ ಎಂದು ‘ಎಎನ್‌ಐ’ ಟ್ವೀಟ್ ಮಾಡಿದೆ.
ಓದಿ:ಡ್ರಗ್ಸ್: ಬಾಲಿವುಡ್ ನಟ ಅರ್ಮಾನ್ ಕೊಹ್ಲಿ ಮನೆ ಮೇಲೆ ಎನ್‌ಸಿಬಿ ದಾಳಿ
ಅರ್ಮಾನ್ ಕೊಹ್ಲಿ ಅವರ ಮುಂಬೈ ನಿವಾಸದ ಮೇಲೆ ಶನಿವಾರ ಸಂಜೆ ಎನ್‌ಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ಶುಕ್ರವಾರ ಕಿರುತೆರೆ ನಟ ಗೌರವ್ ದೀಕ್ಷಿತ್ ಅವರನ್ನು ಕೇಂದ್ರ ಮಾದಕ ವಸ್ತು ನಿಯಂತ್ರಣ ದಳ ಬಂಧಿಸಿತ್ತು. ಇದರ ಮುಂದುವರಿದ ಭಾಗವಾಗಿ ಅರ್ಮಾನ್ ಕೊಹ್ಲಿ ಅವರ ನಿವಾಸದ ಮೇಲೆ ದಾಳಿ ನಡೆದಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.