ADVERTISEMENT

ಡ್ರಗ್ಸ್ ಪ್ರಕರಣ: ಬಾಲಿವುಡ್ ನಟ ಅಜಾಜ್ ಖಾನ್‌ರನ್ನು ವಶಕ್ಕೆ ಪಡೆದ ಎನ್‌ಸಿಬಿ

ಪಿಟಿಐ
Published 31 ಮಾರ್ಚ್ 2021, 2:14 IST
Last Updated 31 ಮಾರ್ಚ್ 2021, 2:14 IST
ಬಾಲಿವುಡ್ ನಟ ಮತ್ತು ಬಿಗ್ ಬಾಸ್ ಮಾಜಿ ಸ್ಪರ್ಧಿ ಅಜಾಜ್ ಖಾನ್
ಬಾಲಿವುಡ್ ನಟ ಮತ್ತು ಬಿಗ್ ಬಾಸ್ ಮಾಜಿ ಸ್ಪರ್ಧಿ ಅಜಾಜ್ ಖಾನ್    

ಮುಂಬೈ: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಮತ್ತು ಬಿಗ್ ಬಾಸ್ ಮಾಜಿ ಸ್ಪರ್ಧಿ ಅಜಾಜ್ ಖಾನ್ ಅವರನ್ನು ಮಾದಕವಸ್ತು ನಿಯಂತ್ರಣ ದಳ (ಎನ್‌ಸಿಬಿ) ಮಂಗಳವಾರ ವಶಕ್ಕೆ ಪಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಡ್ರಗ್ ಪೆಡ್ಲರ್ ಶಾದಾಬ್ ಬಟಾಟಾ ಅವರ ವಿಚಾರಣೆ ವೇಳೆ ಖಾನ್ ಅವರ ಹೆಸರೂ ಕೇಳಿಬಂದಿತ್ತು. ಈ ಸಂಬಂಧ ಅಜಾಜ್ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ತಂಡವು ಅಜಾಜ್ ಖಾನ್ ಜೊತೆಗೆ ಅಂಧೇರಿ ಮತ್ತು ಲೋಖಾಂಡವಾಲಾ ಪ್ರದೇಶಗಳಲ್ಲಿ ಶೋಧಕಾರ್ಯ ನಡೆಸಿದೆ.

ADVERTISEMENT

ಎನ್‌ಸಿಬಿ ಕಚೇರಿಗೆ ಭೇಟಿ ನೀಡಿದ ನಂತರ ಖಾನ್‌ ಅವರನ್ನು ವಶಕ್ಕೆ ಪಡೆಯಲಾಗಿದೆ. ಖಾನ್ ಅವರ ಹೇಳಿಕೆಯನ್ನು ಎನ್‌ಸಿಬಿ ಅಧಿಕಾರಿಗಳು ದಾಖಲಿಸುತ್ತಿದ್ದಾರೆ. ಇನ್ನೂ ಬಂಧಿಸಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ.

ಮಂಗಳವಾರವಷ್ಟೇ ಮುಂಬೈಗೆ ಬಂದಿಳಿದಿದ್ದಅಜಾಜ್ ಖಾನ್, ದಕ್ಷಿಣ ಮುಂಬೈನ ಎನ್‌ಸಿಬಿ ಕಚೇರಿಯ ಹೊರಗೆ ಮಾಧ್ಯಮಗಳೊಂದಿಗೆ ಮಾತನಾಡಿ, ನನ್ನನ್ನು ಬಂಧಿಸಿಲ್ಲ. ಆದರೆ ಸ್ವತಃ ನಾನೇ ಅಧಿಕಾರಿಗಳನ್ನು ಭೇಟಿ ಮಾಡಲು ಬಂದಿರುವುದಾಗಿ ತಿಳಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.