ಮುಂಬೈ: ಐಷಾರಾಮಿ ಹಡಗಿನಲ್ಲಿ ಡ್ರಗ್ಸ್ ಜಪ್ತಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಬಾಲಿವುಡ್ ನಟ ಶಾರುಕ್‌ಖಾನ್ ಚಾಲಕನ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ ಎಂದು ಮಾದಕ ಪದಾರ್ಥ ನಿಯಂತ್ರಣ ಘಟಕದ (ಎನ್‌ಸಿಬಿ) ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ, ಗೋರೆಗಾಂವ ಸೇರಿದಂತೆ ಮುಂಬೈನ ವಿವಿಧೆಡೆ ಶನಿವಾರ ತಡರಾತ್ರಿ ದಾಳಿ ನಡೆಸಲಾಗಿದೆ. ಸಾಂತಾಕ್ರೂಜ್‌ನಲ್ಲಿ ಶಿವರಾಜ್ ರಾಮದಾಸ್ ಎಂಬುವವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಈ ವರೆಗೆ ಆರ್ಯನ್ ಖಾನ್ ಸೇರಿ 19 ಜನರನ್ನು ಎನ್‌ಸಿಬಿ ಬಂಧಿಸಿದೆ.
ಇದನ್ನೂ ಓದಿ... ಡ್ರಗ್ಸ್ ಸೇವನೆ ಅರೋಪ: ಆರ್ಯನ್ ಖಾನ್ಗೆ ಜಾಮೀನು ನಿರಾಕರಣೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.