ಬಂಧನ
(ಪ್ರಾತಿನಿಧಿಕ ಚಿತ್ರ)
ಮುಂಬೈ: ನವಿ ಮುಂಬೈಯಲ್ಲಿ ಡ್ರಗ್ಸ್ ದಂಧೆ ಜಾಲ ಭೇದಿಸಿರುವ ರಾಷ್ಟ್ರೀಯ ಮಾದಕ ವಸ್ತು ನಿಯಂತ್ರಣ ಘಟಕ (ಎನ್‌ಸಿಬಿ) ₹200 ಕೋಟಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ಇಂದು (ಶುಕ್ರವಾರ) ತಿಳಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ.
ಕಳೆದ ವಾರ ನವಿ ಮುಂಬೈನಿಂದ ಸುಮಾರು ₹200 ಕೋಟಿ ಮೌಲ್ಯದ 11.54 ಕೆ.ಜಿ ಕೊಕೇನ್, ಹೈಡ್ರೋಪ್ರೋನಿಕ್ ವೀಡ್ ಮತ್ತು 200 ಪ್ಯಾಕೆಟ್ (5.5 ಕೆ.ಜಿ) ಗಾಂಜಾ ವಶಪಡಿಸಿಕೊಳ್ಳಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಿದೇಶಿ ಮೂಲದವರು ಡ್ರಗ್ಸ್ ದಂಧೆ ನಿರ್ವಹಿಸುತ್ತಿದ್ದರು. ಮಾದಕ ದ್ರವ್ಯ ಸಾಗಣೆಗೆ ಸಂಬಂಧಿಸಿದಂತೆ ಜಾಲ ಭೇದಿಸಲು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.