ADVERTISEMENT

ಶರದ್ ಪವಾರ್ ವಿರುದ್ಧ ಅವಹಳೇನ: ಮೇ 18 ರವರೆಗೆ ನಟಿ ಚಿತಳೆ ಪೊಲೀಸ್ ಕಸ್ಟಡಿಗೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 15 ಮೇ 2022, 7:35 IST
Last Updated 15 ಮೇ 2022, 7:35 IST
ಶರದ್ ಪವಾರ್ ಮತ್ತು ಕೇತಕಿ ಚಿತಳೆ
ಶರದ್ ಪವಾರ್ ಮತ್ತು ಕೇತಕಿ ಚಿತಳೆ   

ಮುಂಬೈ: ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹಂಚಿಕೊಂಡಿರುವ ಆರೋಪದ ಮೇಲೆ ಮರಾಠಿ ನಟಿ ಕೇತಕಿ ಚಿತಳೆ ಅವರನ್ನು ಬಂಧಿಸಲಾಗಿದೆ.

ಪ್ರಕರಣ ಕುರಿತು ವಿಚಾರಣೆ ನಡೆಸಿದಥಾಣೆ ನ್ಯಾಯಾಲಯ ನಟಿ ಕೇತಕಿ ಚಿತಳೆ ಅವರನ್ನು ಮೇ 18ರ ವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.

ಮರಾಠಿ ಭಾಷೆಯಲ್ಲಿರುವ ಈ ಪೋಸ್ಟ್‌ ಅನ್ನು ಚಿತಳೆ ಅವರು ಶುಕ್ರವಾರ ಹಂಚಿಕೊಂಡಿದ್ದರು. ಪವಾರ್ ಹೆಸರನ್ನು ನಮೂದಿಸಿದ್ದ ಚಿತಳೆ, ‘ನೀವು ಬ್ರಾಹ್ಮಣರನ್ನು ದ್ವೇಷಿಸುತ್ತೀರಿ. ನಿಮಗಾಗಿನರಕ ಕಾಯುತ್ತಿದೆ’ ಎಂದು ಬರೆದುಕೊಂಡಿದ್ದರು.

ADVERTISEMENT

ಸ್ವಪ್ನಿಲ್ ನೆಟ್ಕೆ ಎಂಬುವರು ನೀಡಿದ ದೂರಿನ ಆಧಾರದ ಮೇಲೆ ಥಾಣೆಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಚಿತಳೆ ಅವರನ್ನು ಶನಿವಾರ ಬಂಧಿಸಲಾಗಿದೆ.

ಮುಂಬೈನ ಭೋಯಿವಾಡ ಪೊಲೀಸ್ ಠಾಣೆಯಲ್ಲಿ ಕೇತಕಿ ಚಿತಳೆ ವಿರುದ್ಧ ಐಪಿಸಿ ಸೆಕ್ಷನ್ 153A, 500, 501 ಮತ್ತು 504, 506 ಮತ್ತು 34 ರ ಅಡಿಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ. ಆಕೆಯ ವಿರುದ್ಧ ಇದುವರೆಗೆ ಒಟ್ಟು 5 ಪ್ರಕರಣಗಳು ದಾಖಲಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.