ADVERTISEMENT

ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್‌ಗೆ ಕೋವಿಡ್–19 ದೃಢ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 24 ಜನವರಿ 2022, 9:19 IST
Last Updated 24 ಜನವರಿ 2022, 9:19 IST
ಶರದ್ ಪವಾರ್‌
ಶರದ್ ಪವಾರ್‌   

ಮುಂಬೈ: ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಕುರಿತು ಟ್ವೀಟ್ ಮೂಲಕ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

‘ನನಗೆ ಕೋವಿಡ್ ದೃಢಪಟ್ಟಿದೆ. ಆದರೆ, ಚಿಂತಿಸಬೇಕಾಗಿಲ್ಲ. ನನ್ನ ವೈದ್ಯರು ಸೂಚಿಸಿದ ಪ್ರಕಾರ ಔಷಧ ತೆಗೆದುಕೊಳ್ಳುತ್ತಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಹಾಗೂ ಮುನ್ನೆಚ್ಚರಿಕೆವಹಿಸಿ ಎಂದು ಮನವಿ ಮಾಡಿಕೊಳ್ಳುತ್ತೇನೆ’ ಎಂದು ಅವರು ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT