ADVERTISEMENT

ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್‌ಗೆ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ

ಪಿಟಿಐ
Published 10 ಜನವರಿ 2023, 4:27 IST
Last Updated 10 ಜನವರಿ 2023, 4:27 IST
ಶರದ್‌ ಪವಾರ್‌
ಶರದ್‌ ಪವಾರ್‌   

ಮುಂಬೈ: ನ್ಯಾಷನಲ್‌ ಕಾಂಗ್ರೆಸ್‌ ಪಕ್ಷದ (ಎನ್‌ಸಿಪಿ) ಅಧ್ಯಕ್ಷ ಶರದ್‌ ಪವಾರ್‌ ಅವರು ಮುಂಬೈನ ಆಸ್ಪತ್ರೆಯಲ್ಲಿ ಮಂಗಳವಾರ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಮಾಡಿಸಿಕೊಳ್ಳಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಶರದ್‌ ಪವಾರ್‌ ಅವರು ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಬೇಕಿತ್ತು. ಆದರೆ, ಸದ್ಯ ಶಸ್ತ್ರಚಿಕಿತ್ಸೆ ಸಲುವಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಪವಾರ್‌ ಅವರ ಸಂಬಂಧಿಯೂ ಆಗಿರುವ ಎನ್‌ಸಿಪಿಯ ಹಿರಿಯ ನಾಯಕ ಅಜಿತ್‌ ಪವಾರ್‌ ಸೋಮವಾರ ಹೇಳಿದ್ದರು.

ದಕ್ಷಿಣ ಮುಂಬೈನಲ್ಲಿರುವ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಯಲಿದೆ. 82 ವರ್ಷದ ಪವಾರ್‌, ಈ ಹಿಂದೆಯೇ ಒಂದು ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.