ಸುನಿಲ್ ತತ್ಕರೆ
ಛತ್ರಪತಿ ಸಂಭಾಜಿನಗರ: ಶರದ್ ಪವಾರ್ ಬಣದೊಂದಿಗೆ ಒಂದಾಗಬೇಕಿದ್ದರೆ ಬಿಜೆಪಿಯೊಂದಿಗೆ ಸಮಾಲೋಚನೆ ನಡೆಸಬೇಕು ಎಂದು ಎನ್‌ಸಿಪಿ ನಾಯಕ ಸುನಿಲ್ ತತ್ಕರೆ ಹೇಳಿದ್ದಾರೆ.
ಸದ್ಯದ ಮಟ್ಟಿಗೆ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಹಾಗೂ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಒಟ್ಟಾಗುವುದು ಅಸಾಧ್ಯದ ಮಾತು ಎಂದು ಅವರು ಹೇಳಿದ್ದಾರೆ.
ಮರಾಠವಾಡ ಪ್ರವಾಸಕ್ಕೂ ಮುನ್ನ ಪತ್ರಕರ್ತರು ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದ್ದಾರೆ.
ಒಟ್ಟಾಗುವ ಬಗ್ಗೆ ಯಾವುದೇ ಮಾತುಕತೆಗಳು ನಡೆಯುತ್ತಿಲ್ಲ. ಎನ್‌ಡಿಎ ಮೈತ್ರಿಕೂಟದೊಂದಿಗೆ ಇರುತ್ತೇವೆ ಎಂದು ನಾವು ಬಹಿರಂಗ ಗೊತ್ತುವಳಿ ಮಂಡಿಸಿದ್ದೇವೆ. ಅದನ್ನು ಒಪ್ಪಿಕೊಳ್ಳುವವರು ನಮ್ಮೊಂದಿಗೆ ಸೇರಿಕೊಳ್ಳಬಹುದು ಎಂದು ಹೇಳಿದ್ದಾರೆ.
‘ಒಂದು ವೇಳೆ ಒಟ್ಟಾಗುವ ಸನ್ನಿವೇಶ ಬಂದರೆ, ಬಿಜೆಪಿಯ ಕೇಂದ್ರ ನಾಯಕತ್ವದ ಜೊತೆಗೆ ನಾವು ಮಾತುಕತೆ ನಡೆಸಬೇಕಾಗುತ್ತದೆ. ಯಾಕೆಂದರೆ ಅವರು ನಮ್ಮನ್ನು ಸೇರಿಸಿಕೊಂಡಿದ್ದಾರೆ. ಅವರ ಅಭಿಪ್ರಾಯ ಪಡೆಯುವುದು ಸಹಜ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.