ADVERTISEMENT

ದೆಹಲಿಯ ಆಡಳಿತಗಾರರ ಮುಂದೆ ಎಂದಿಗೂ ಶರಣಾಗುವುದಿಲ್ಲ: ಶರದ್‌ ಪವಾರ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 11 ಸೆಪ್ಟೆಂಬರ್ 2022, 13:52 IST
Last Updated 11 ಸೆಪ್ಟೆಂಬರ್ 2022, 13:52 IST
ಶರದ್‌ ಪವಾರ್‌
ಶರದ್‌ ಪವಾರ್‌   

ನವದೆಹಲಿ: ದೆಹಲಿಯ ಆಡಳಿತಗಾರರ ಮುಂದೆ ಎಂದಿಗೂ ಶರಣಾಗುವುದಿಲ್ಲ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕ ಶರದ್‌ ಪವಾರ್‌ ತಿಳಿಸಿದ್ದಾರೆ. ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕೇಸರಿ ಪಕ್ಷವನ್ನು ಅಧಿಕಾರದಿಂದ ದೂರವಿಡಬೇಕಿದೆ. ಆ ಹಿನ್ನೆಲೆಯಲ್ಲಿ ಬಿಜೆಪಿಯೇತರ ಪಕ್ಷಗಳು ಒಟ್ಟಾಗಿ ಕೆಲಸ ಮಾಡಬೇಕೆಂದು ಒತ್ತಾಯಿಸಿದ್ದಾರೆ.

ಎನ್‌ಸಿಪಿಯ ಎಂಟನೇ ರಾಷ್ಟ್ರೀಯ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಪವಾರ್, ಹೆಚ್ಚುತ್ತಿರುವ ಹಣದುಬ್ಬರ, ನಿರುದ್ಯೋಗ, ರೈತರ ಸಮಸ್ಯೆಗಳು ಹಾಗೂ ಅಲ್ಪಸಂಖ್ಯಾತರ ವಿರುದ್ಧದ ದ್ವೇಷದ ಕುರಿತು ಕೇಂದ್ರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ADVERTISEMENT

ಜಾರಿ ನಿರ್ದೇಶನಾಲಯ, ಸಿಬಿಐ ಮತ್ತು ಇತರೆ ಕೇಂದ್ರೀಯ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ. ಈಗಿನ ಕೇಂದ್ರ ಸರಕಾರವನ್ನು ನಾವು ಪ್ರಜಾಸತ್ತಾತ್ಮಕವಾಗಿ ಎದುರಿಸಬೇಕಿದೆ. ನಾವು ಹೋರಾಟಕ್ಕೆ ಸಿದ್ಧರಾಗಿರಬೇಕು ಎಂದು ಹೇಳಿದ್ದಾರೆ.

ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಫಾರೂಕ್ ಅಬ್ದುಲ್ಲಾ, ಪಿ ಚಿದಂಬರಂ, ಕಾರ್ತಿ ಚಿದಂಬರಂ, ಸಂಜಯ್ ರಾವತ್, ನವಾಬ್ ಮಲಿಕ್, ಅಭಿಷೇಕ್ ಬ್ಯಾನರ್ಜಿ, ಸತ್ಯೇಂದ್ರ ಜೈನ್, ಮನೀಶ್ ಸಿಸೋಡಿಯಾ ಸೇರಿದಂತೆ ಪ್ರತಿಪಕ್ಷಗಳ ಪ್ರಮುಖ ನಾಯಕರನ್ನು ಕೇಂದ್ರದ ಏಜೆನ್ಸಿಗಳು ತನಿಖೆಗೆ ಒಳಪಡಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.