ADVERTISEMENT

‍ಪತ್ರಕರ್ತರ ಮೇಲೆ ಹಲ್ಲೆ: ಎನ್‌ಸಿಆರ್‌ಬಿ ನಿರ್ಲಕ್ಷ್ಯ ಬಟಾಬಯಲು ಮಾಡಿದ ಕೇಂದ್ರ!

ಪಿಟಿಐ
Published 1 ಡಿಸೆಂಬರ್ 2021, 14:19 IST
Last Updated 1 ಡಿಸೆಂಬರ್ 2021, 14:19 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಪತ್ರಕರ್ತರನ್ನು ಗುರಿಯಾಗಿಸಿ ನಡೆಯುವ ಹಲ್ಲೆ ಪ್ರಕರಣಗಳಿಗೆ ಸಂಬಂಧಿಸಿ ರಾಷ್ಟ್ರೀಯ ಅಪರಾಧ ದಾಖಲೆಗಳ ಸಂಸ್ಥೆಯು (ಎನ್‌ಸಿಆರ್‌ಬಿ) ನಿರ್ದಿಷ್ಟವಾದ ದತ್ತಾಂಶ ನಿರ್ವಹಣೆ ಮಾಡುವುದಿಲ್ಲ ಎಂದು ಕೇಂದ್ರ ಸರ್ಕಾರ ರಾಜ್ಯಸಭೆಗೆ ತಿಳಿಸಿದೆ.

ಈ ಕುರಿತ ಪ್ರಶ್ನೆಗೆ ಉತ್ತರಿಸಿದ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರಾಯ್‌, ‘ಮಾಧ್ಯಮ ಪ್ರತಿನಿಧಿಗಳ ಸುರಕ್ಷತೆ ಹಾಗೂ ರಕ್ಷಣೆಗೆ ಸಂಬಂಧಪಟ್ಟಂತೆ ಕಾನೂನನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ರಾಜ್ಯ ಸರ್ಕಾರಗಳಿಗೆ ಕೇಂದ್ರವು 2017ರಲ್ಲಿ ಸಲಹೆ ನೀಡಿದೆ’ ಎಂದು ತಿಳಿಸಿದರು.

‘ಸಂವಿಧಾನದ 7ನೇ ಅನುಸೂಚಿ ಪ್ರಕಾರ, ಪೊಲೀಸ್‌ ಹಾಗೂ ಕಾನೂನು–ಸುವ್ಯವಸ್ಥೆ ಕಾಪಾಡುವುದು ರಾಜ್ಯಕ್ಕೆ ಸೇರಿದ ವಿಷಯಗಳಾಗಿವೆ. ಅಪರಾಧಗಳನ್ನು ತಡೆಯುವುದು, ಪತ್ತೆ ಹಚ್ಚುವುದು, ತನಿಖೆ ನಡೆಸಿ ಅಪರಾಧಿಗಳ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕಾದ್ದು ರಾಜ್ಯ ಸರ್ಕಾರಗಳ ಜವಾಬ್ದಾರಿ’ ಎಂದು ಅವರು ಸದನಕ್ಕೆ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.