ADVERTISEMENT

ಲೈಂಗಿಕ ಕಿರುಕುಳ: ಆಂಧ್ರ ಪ್ರದೇಶದ ಹಿಂದೂಪುರ ಸಂಸದನ ವಿರುದ್ಧ ದೂರು

ಪಿಟಿಐ
Published 11 ಆಗಸ್ಟ್ 2022, 13:05 IST
Last Updated 11 ಆಗಸ್ಟ್ 2022, 13:05 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ:ಆಂಧ್ರಪ್ರದೇಶದ ಹಿಂದೂಪುರ ಸಂಸದ ಗೋರಂಟ್ಲಾ ಮಾಧವ ವಿರುದ್ಧ ಲೈಂಗಿಕ ಕಿರುಕುಳ ಆರೋಪದ ದೂರು ಬಂದಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ರಾಷ್ಟ್ರೀಯ ಮಹಿಳಾ ಆಯೋಗ (ಎನ್‌ಸಿಡಬ್ಲ್ಯು) ಲೋಕಸಭೆಯ ಸಭಾಪತಿ ಓಂ ಬಿರ್ಲಾ ಅವರನ್ನು ಒತ್ತಾಯಿಸಿದೆ.

‘ಮಾಧವ ಅವರು ಸಂತ್ರಸ್ತೆಯ ಒಪ್ಪಿಗೆಯಿಲ್ಲದೆ ವಿಡಿಯೊ ಕರೆಯಲ್ಲಿ ತೊಡಗಿದ್ದರು’ ಎಂದು ದೂರಿನಲ್ಲಿ ತಿಳಿಸಲಾಗಿದೆ.

‘ವಿಡಿಯೊದಲ್ಲಿ ಸಂಸದರು ಮಾತನಾಡಿರುವ ವಿಷಯವು ಅಸಭ್ಯ, ಅಶ್ಲೀಲ ಮತ್ತು ಘನತೆರಹಿತವಾಗಿದೆ ಎಂಬುದಾಗಿ ಆರೋಪಿಸಲಾಗಿದೆ. ಈ ಎಲ್ಲಾ ಆರೋಪಗಳನ್ನು ಗಂಭೀರವಾಗಿ ಪರಿಗಣಿಸಿದ್ದು, ಘಟನೆಯನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಬಿರ್ಲಾ ಅವರಿಗೆ ಪತ್ರ ಬರೆಯಲಾಗಿದೆ’ ಎಂದು ಎನ್‌ಸಿಡಬ್ಲ್ಯು ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ADVERTISEMENT

ಎನ್‌ಸಿಡಬ್ಲ್ಯು ಅಧ್ಯಕ್ಷೆ ರೇಖಾ ಶರ್ಮಾ ಅವರು, ಆಂಧ್ರಪ್ರದೇಶದ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದು ಈ ವಿಚಾರದಲ್ಲಿ ಸ್ವತಂತ್ರ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ ಎಂದೂ ಹೇಳಿಕೆಯಲ್ಲಿ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.