ADVERTISEMENT

ಹಾಸ್ಯಕಲಾವಿದೆಗೆ ಬೆದರಿಕೆ: ಕ್ರಮಕೈಗೊಳ್ಳಲು ಮಹಿಳಾ ಆಯೋಗ ಸೂಚನೆ

ಪಿಟಿಐ
Published 12 ಜುಲೈ 2020, 7:44 IST
Last Updated 12 ಜುಲೈ 2020, 7:44 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ಸಾಮಾಜಿಕ ಜಾಲತಾಣದಲ್ಲಿ ಹಾಸ್ಯ ಕಲಾವಿದೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಅತ್ಯಾಚಾರದ ಬೆದರಿಕೆ ಹಾಕಿದ ವ್ಯಕ್ತಿಯ ವಿರುದ್ಧ ಗುಜರಾತ್‌ ಪೊಲೀಸರು ತಕ್ಷಣವೇ ಕಠಿಣ ಕ್ರಮಕೈಗೊಳ್ಳಬೇಕು ಎಂದು ರಾಷ್ಟ್ರೀಯ ಮಹಿಳಾ ಆಯೋಗ ಸೂಚಿಸಿದೆ.

‘ನಮಗೆ ಟ್ವಿಟರ್‌ ಖಾತೆಯಲ್ಲಿ ವಿಡಿಯೊವೊಂದನ್ನು ಟ್ಯಾಗ್‌ ಮಾಡಲಾಗಿದೆ. ಇದರಲ್ಲಿ ಕಲಾವಿದೆಯ‌ನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಅತ್ಯಾಚಾರ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ’ ಎಂದು ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಅವರು ಹಿರಿಯ ಪೊಲೀಸ್‌ ಅಧಿಕಾರಿ ಶಿವಾನಂದ ಜಾ ಅವರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.

‘ಪ್ರಕರಣದ ಸೂಕ್ಷ್ಮತೆಯನ್ನು ಅರಿತು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಆರೋಪಿ ವಿರುದ್ಧ ಆದಷ್ಟು ಬೇಗ ಕಠಿಣ ಕ್ರಮ ತೆಗೆದುಕೊಳ್ಳಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.