ADVERTISEMENT

ಎನ್‌ಡಿಎ ಮೈತ್ರಿಕೂಟದ ಸಂಸದೀಯ ಮಂಡಳಿ ನಾಯಕರಾಗಿ ನರೇಂದ್ರಮೋದಿ ಆಯ್ಕೆ

​ಪ್ರಜಾವಾಣಿ ವಾರ್ತೆ
Published 25 ಮೇ 2019, 18:38 IST
Last Updated 25 ಮೇ 2019, 18:38 IST
   

ನವದೆಹಲಿ: ನರೇಂದ್ರ ಮೋದಿ ಅವರನ್ನು ಲೋಕಸಭೆಯಲ್ಲಿ ತಮ್ಮ ಸಂಸದೀಯ ಪಕ್ಷದ ನಾಯಕನಾಗಿ ಎನ್‌ಡಿಎ ಮೈತ್ರಿಕೂಟದ ಸಂಸದರು ಶನಿವಾರ ಆಯ್ಕೆ ಮಾಡಿದರು.

ಶನಿವಾರ ಸಂಸತ್ ಭವನದ ಸೆಂಟ್ರಲ್‌ ಹಾಲ್‌ನಲ್ಲಿ ನಡೆದ ಸಭೆಯಲ್ಲಿ ಬಿಜೆಪಿಯ 303 ಮತ್ತು ಎನ್‌ಡಿಎ ಮೈತ್ರಿಕೂಟದ ಇತರ ಪಕ್ಷಗಳ 50 ಸಂಸದರು ಪಾಲ್ಗೊಂಡಿದ್ದರು.

ಬಿಜೆಪಿಯ ಹಿರಿಯ ನಾಯಕರಾದ ಲಾಲ್‌ ಕೃಷ್ಣ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಷಿ ಅವರೂ ಭಾಗಿಯಾಗಿದ್ದು, ನರೇಂದ್ರ ಮೋದಿ ಅವರೊಂದಿಗೆ ವೇದಿಕೆ ಹಂಚಿಕೊಂಡರು. ಮೊದಲಿಗೆ ಮೋದಿ ಅವರನ್ನು ಬಿಜೆಪಿ ಸಂಸದೀಯ ಪಕ್ಷದ ನಾಯಕನಾಗಿ ಆಯ್ಕೆ ಮಾಡಲಾಯಿತು.

ADVERTISEMENT

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ನರೇಂದ್ರ ಮೋದಿ ಅವರನ್ನು ಬಿಜೆಪಿ ಸಂಸದೀಯ ಪಕ್ಷದ ನಾಯಕನಾಗಿ ಆಯ್ಕೆ ಮಾಡುವಪ್ರಸ್ತಾವವನ್ನು ಸಭೆಯ ಮುಂದಿರಿಸಿದರು. ಇದನ್ನು ಸಂಸದರಾದ ರಾಜನಾಥ್ ಸಿಂಗ್ ಮತ್ತು ನಿತಿನ್ ಗಡ್ಕರಿ ಅವರು ಅನುಮೋದಿಸಿದರು. ಬಿಜೆಪಿ ಸದಸ್ಯರು ಕೈಮೇಲೆತ್ತುವ ಮೂಲಕ ಪ್ರಸ್ತಾವವನ್ನು ಅನುಮೋದಿಸಿದರು.

ಆನಂತರ ಮೋದಿ ಅವರನ್ನು ಎನ್‌ಡಿಎ ಸಂದೀಯ ನಾಯಕನಾಗಿ ಆಯ್ಕೆ ಮಾಡುವ ಪ್ರಕ್ರಿಯೆನಡೆಯಿತು. ಶಿರೋಮಣಿ ಅಕಾಲಿ ದಳದ ನಾಯಕ ಪ್ರಕಾಶ್‌ ಸಿಂಗ್ ಬಾದಲ್‌ ಅವರು ಈ ಪ್ರಸ್ತಾವವನ್ನು ಮಂಡಿಸಿದರು. ಅದನ್ನು ಜೆಡಿಯು ನಾಯಕ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಶಿವಸೇನಾ ಮುಖ್ಯಸ್ಥ ಉದ್ಧವ್ಠಾಕ್ರೆ ಹಾಗೂ ಎಲ್‌ಜೆಪಿಯರಾಮ್‌ವಿಲಾಸ್ಪಾ ಸ್ವಾನ್ ಅನುಮೋದಿಸಿದರು. ಆನಂತರ ಎನ್‌ಡಿಎಮೈತ್ರಿಕೂಟದ ಸಂಸದರು ಕೈಮೇಲೆತ್ತುವ ಮೂಲಕ ಪ್ರಸ್ತಾವವನ್ನು ಅನುಮೋದಿಸಿದರು.

ಸರ್ಕಾರ ರಚನೆಗೆ ಆಹ್ವಾನ

ಎನ್‌ಡಿಎ ಸಂಸದೀಯ ಪಕ್ಷದ ಸಭೆಯ ಬಳಿಕ, ರಾತ್ರಿ 8 ಗಂಟೆಗೆ ಮೋದಿ ಅವರು ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರನ್ನು ಭೇಟಿಮಾಡಿ ಸರ್ಕಾರ ರಚನೆಯ ಹಕ್ಕು ಮಂಡಿಸಿದರು.

ಇದಾದ ಬಳಿಕ ರಾಷ್ಟ್ರಪತಿ ಅವರು ಸರ್ಕಾರ ರಚಿಸುವಂತೆ ಮೋದಿ ಅವರಿಗೆ ಆಹ್ವಾನ ನೀಡಿದ್ದಾರೆ.

ಪ್ರಮಾಣವಚನ ಸ್ವೀಕಾರ ದಿನಾಂಕ ಇನ್ನಷ್ಟೇ ನಿರ್ಧಾರ ಆಗಬೇಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.