ನವದೆಹಲಿ: ಉಪರಾಷ್ಟ್ರಪತಿ ಚುನಾವಣೆಗೆ ತಮ್ಮ ಅಭ್ಯರ್ಥಿಯನ್ನು ನಿರ್ಧರಿಸುವ ಅಧಿಕಾರವನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಎನ್‌ಡಿಎ ಮೈತ್ರಿಕೂಟ ನೀಡಿದೆ.
ಮೈತ್ರಿಕೂಟದ ನಾಯಕರು ಸರ್ವಾನುಮತದಿಂದ ಅಭ್ಯರ್ಥಿ ಆಯ್ಕೆ ನಿರ್ಧಾರವನ್ನು ಲೋಕಸಭೆಯ ಸದನ ನಾಯಕರಾದ ಮೋದಿ ಮತ್ತು ರಾಜ್ಯಸಭೆಯ ಸದನ ನಾಯಕರಾದ ನಡ್ಡಾ ಅವರಿಗೆ ವಹಿಸಿದ್ದಾರೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ.
‘ಸಂಭವನೀಯ ಅಭ್ಯರ್ಥಿ ಆಯ್ಕೆ ಕುರಿತು ಯಾವುದೇ ಚರ್ಚೆಗಳು ನಡೆದಿಲ್ಲ. ಜೊತೆಗೆ ವಿಪಕ್ಷಗಳು ಈ ಬಗ್ಗೆ ನಮ್ಮೊಂದಿಗೆ ಚರ್ಚಿಸಿದರೆ, ನಾವು ಅವರೊಂದಿಗೆ ಚರ್ಚಿಸಲು ಸಿದ್ಧರಿದ್ದೇವೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.