ಪಟ್ನಾ: ಎನ್‌ಡಿಎ ಮೈತ್ರಿಕೂಟದ ಭಾಗವಾಗಿರುವ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಅವರ ಪಕ್ಷದ ಅಭ್ಯರ್ಥಿಯೊಬ್ಬರ ನಾಮಪತ್ರ ಶನಿವಾರ ತಿರಸ್ಕೃತಗೊಂಡಿದೆ.
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಲೋಕ ಜನಶಕ್ತಿ ಪಕ್ಷದ ಅಭ್ಯರ್ಥಿಯಾಗಿ(ರಾಮ್ ವಿಲಾಸ್) ಮರ್‌ಹೌರಾ ಕ್ಷೇತ್ರದಿಂದ ಸ್ಪರ್ಧಿಸಲು ಮಾಜಿ ನಟಿ ಸೀಮಾ ಸಿಂಗ್ ಅವರು ನಾಮಪತ್ರ ಸಲ್ಲಿಸಿದ್ದರು. ತಾಂತ್ರಿಕ ಕಾರಣದ ಆಧಾರದಲ್ಲಿ ಅವರ ನಾಮಪತ್ರವನ್ನು ಚುನಾವಣಾ ಅಧಿಕಾರಿಗಳು ತಿರಸ್ಕರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.