ADVERTISEMENT

ಈಶಾನ್ಯ ರಾಜ್ಯಗಳ ಜನರ ಸೇವೆಗೆ ಬದ್ಧ: ಪ್ರಧಾನಿ ನರೇಂದ್ರ ಮೋದಿ

ಪಿಟಿಐ
Published 13 ಡಿಸೆಂಬರ್ 2020, 14:33 IST
Last Updated 13 ಡಿಸೆಂಬರ್ 2020, 14:33 IST
ನರೇಂದ್ರ ಮೋದಿ
ನರೇಂದ್ರ ಮೋದಿ   

ನವದೆಹಲಿ: ‘ಈಶಾನ್ಯ ರಾಜ್ಯಗಳ ಜನರ ಶ್ರೇಯೋಭಿವೃದ್ಧಿಗೆ ಎನ್‌ಡಿಎ ಬದ್ಧವಾಗಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಹೇಳಿದ್ದಾರೆ.

ಬೋಡೊಲ್ಯಾಂಡ್‌ ಪ್ರಾದೇಶಿಕ ಮಂಡಳಿಯ (ಬಿಟಿಎ) ಅಧಿಕಾರದ ಗದ್ದುಗೆ ಏರಲು ಯುಪಿಪಿಎಲ್‌ಗೆ ಬಿಜೆಪಿ ಬೆಂಬಲ ಪ್ರಕಟಿಸಿದ ಬೆನ್ನಲ್ಲೇ ಟ್ವೀಟ್‌ ಮಾಡಿರುವ ಮೋದಿ ‘ನಮ್ಮ ಮಿತ್ರಪಕ್ಷ ಯುಪಿಪಿಎಲ್‌ ಹಾಗೂ ಅಸ್ಸಾಂ ಬಿಜೆಪಿಗೆ ಶುಭಾಶಯಗಳು. ಈ ಮೈತ್ರಿಕೂಟವು ಜನರ ಆಶೋತ್ತರಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕೆಲಸ ಮಾಡಲಿ ಎಂದು ಹಾರೈಸುತ್ತೇನೆ. ಎನ್‌ಡಿಎ ಮೈತ್ರಿಕೂಟದ ಮೇಲೆ ನಂಬಿಕೆ ಇಟ್ಟ ಜನರಿಗೆ ಆಭಾರಿಯಾಗಿದ್ದೇನೆ’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT