ADVERTISEMENT

ಬಿಹಾರ ರಾಜಕೀಯ ಬೆಳವಣಿಗೆ: ನಾಳೆ ಜೆಡಿಯು ಸಭೆ ಕರೆದ ಸಿಎಂ ನಿತೀಶ್‌ ಕುಮಾರ್‌

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 8 ಆಗಸ್ಟ್ 2022, 7:06 IST
Last Updated 8 ಆಗಸ್ಟ್ 2022, 7:06 IST
 ನಿತೀಶ್‌ ಕುಮಾರ್‌
ನಿತೀಶ್‌ ಕುಮಾರ್‌   

ಪಟ್ನಾ: ಬಿಹಾರದಲ್ಲಿ ಜನತಾ ದಳ (ಯು) ಪಕ್ಷಕ್ಕೆ ಆರ್‌.ಸಿ.ಪಿ. ಸಿಂಗ್‌ ರಾಜೀನಾಮೆ ಸಲ್ಲಿಸಿದ ಬಳಿಕ ಮುಖ್ಯಮಂತ್ರಿ ನಿತೀಶ್‌ಕುಮಾರ್‌ ಅವರು ಮಂಗಳವಾರ (ಆ.9) ಪಕ್ಷದ ಸಂಸದರು, ಶಾಸಕರ ಸಭೆ ಕರೆದಿದ್ದಾರೆ.

ಬಿಹಾರದಲ್ಲಿ ಜೆಡಿ(ಯು) ಮತ್ತು ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆ. ಸದ್ಯ ಉಭಯ ಪಕ್ಷಗಳ ನಡುವೆ ಶೀತಲ ಸಮರ ನಡೆಯುತ್ತಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಸದ್ಯ ಜೆಡಿ(ಯು) ಕೇಂದ್ರ ಸರ್ಕಾರದ ಸಚಿವ ಸಂಪುಟದಿಂದ ಹೊರಗಿದೆ. ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರು ಕೇಂದ್ರ ಸರ್ಕಾರಕ್ಕೆ ಅಗತ್ಯ ಸಹಕಾರ ನೀಡುತ್ತಿಲ್ಲ ಎಂದು ಬಿಹಾರ ಬಿಜೆಪಿ ನಾಯಕರು ಆರೋಪಿಸಿದ್ದಾರೆ. ಭಾನುವಾರ ನಡೆದ ನೀತಿ ಆಯೋಗದ ಸಭೆಗೆ ನಿತೀಶ್‌ ಕುಮಾರ್‌ ಗೈರಾಗಿದ್ದರು.

ADVERTISEMENT

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮಿತ್ರಪಕ್ಷಗಳಿಗೆ ಸರಿಯಾದ ಪ್ರಾತಿನಿಧ್ಯ ನೀಡದೆ ಕಡೆಗಣಿಸಲಾಗುತ್ತಿದೆ ಎಂದು ಜೆಡಿಯು ನಾಯಕರು ಅಸಮಾಧಾನ ಹೊರ ಹಾಕಿದ್ದಾರೆ.

ಕಳೆದ ತಿಂಗಳು ಜೆಡಿಯು ಪಕ್ಷ ಆರ್‌ಸಿಪಿ ಸಿಂಗ್‌ ಅವರಿಗೆ ರಾಜ್ಯಸಭಾ ಸ್ಥಾನವನ್ನು ನೀಡಲು ನಿರಾಕರಿಸಿತ್ತು. ಇದನ್ನು ಉಲ್ಲೇಖಿಸಿ ಮಾತನಾಡಿರುವಆರ್‌ಸಿಪಿ ಸಿಂಗ್‌ 'ನಾನು ಕೇಂದ್ರ ಸಚಿವನಾಗದಂತೆ ನನ್ನ ವಿರುದ್ಧ ಪಿತೂರಿ ನಡೆಯುತ್ತಿದೆ' ಎಂದು ಆರೋಪ ಮಾಡಿದ್ದರು.

ಇತ್ತ ನಿತೀಶ್‌ ಕುಮಾರ್ ಅವರುಆರ್‌ಸಿಪಿ ಸಿಂಗ್‌ ವಿರುದ್ಧ ಆರೋಪ ಮಾಡಿದ್ದು ಕಳೆದ ವರ್ಷ ನನ್ನಸಂಪರ್ಕ ಮಾಡದೇ ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದಲ್ಲಿ ಸ್ಥಾನ ಪಡೆದಿದ್ದರು ಎಂದು ದೂರಿದ್ದಾರೆ.

ಜೆಡಿಯು ಪಕ್ಷದ ಆಂತರಿಕ ಜಗಳವನ್ನು ಬಿಜೆಪಿಯ ಮೇಲೆ ಗೂಬೆ ಕೂರಿಸಲಾಗುತ್ತಿದೆ. ನಮ್ಮ ಮತ್ತು ಜೆಡಿಯು ನಡುವಿನ ಸಂಬಂಧ ಚೆನ್ನಾಗಿದೆ ಎಂದು ಬಿಜೆಪಿ ಹೇಳಿದೆ.

ನೀತಿ ಆಯೋಗದ ಸಭೆಗೆ ಮುಖ್ಯಮಂತ್ರಿ ನಿತೀಶ್‌ ಕುಮಾರ್ ಗೈರಾಗಿರುವುದರಿಂದ ಬಿಜೆಪಿ ಜತೆಗಿನ ಸಂಬಂಧ ಹಳಸಿದೆ ಎಂಬ ವದಂತಿಗಳನ್ನು ಅಲ್ಲಗಳೆದ ಅವರು, ಜೆಡಿಯು ಮತ್ತು ಬಿಜೆಪಿ ನಡುವೆ ‘ಎಲ್ಲವೂ ಚೆನ್ನಾಗಿದೆ’ ಎಂದು ಜೆಡಿ(ಯು) ರಾಷ್ಟ್ರೀಯ ಅಧ್ಯಕ್ಷ ರಾಜೀವ್ ರಂಜನ್ ಸಿಂಗ್ (ಲಾಲನ್) ಹೇಳಿಕೊಂಡಿದ್ದಾರೆ.

'ಆರ್‌ಸಿಪಿ ಸಿಂಗ್‌ ಪಕ್ಷದಿಂದ ನಿರ್ಗಮಿಸುವುದು ನಿರೀಕ್ಷಿತವಾಗಿತ್ತು ಎಂದು ಹೇಳಿದ ಅವರು2019ರ ಲೋಕಸಭಾ ಚುನಾವಣೆಯ ಬಳಿಕ ಕೇಂದ್ರ ಸರ್ಕಾರವನ್ನು ಸೇರದಿರಲು ನಿರ್ಧರಿಸಿದ್ದೆವು. ನಾವು ನಮ್ಮ ನಿಲುವಿಗೇ ಅಂಟಿಕೊಳ್ಳುತ್ತೇವೆ’ ಎಂದು ರಾಜೀವ್‌ ರಂಜನ್‌ ನಿನ್ನೆ ಮಾಧ್ಯಮಗಳ ಮುಂದೆ ಹೇಳಿದ್ದರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.