ADVERTISEMENT

ಬಿಹಾರ ಮುಖ್ಯಮಂತ್ರಿ ಆಯ್ಕೆಗೆ ಇಂದು ಎನ್‌ಡಿಎ ಸಭೆ

ಏಜೆನ್ಸೀಸ್
Published 15 ನವೆಂಬರ್ 2020, 4:44 IST
Last Updated 15 ನವೆಂಬರ್ 2020, 4:44 IST
ನಿತೀಶ್ ಕುಮಾರ್ (ಪಿಟಿಐ ಚಿತ್ರ)
ನಿತೀಶ್ ಕುಮಾರ್ (ಪಿಟಿಐ ಚಿತ್ರ)   

ಪಟ್ನಾ: ಬಿಹಾರದ ಮುಂದಿನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವ ಸಲುವಾಗಿ ಇಂದು ಮಧ್ಯಾಹ್ನ 12.30ಕ್ಕೆ ಎನ್‌ಡಿಎ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಜೆಡಿಯು ಪಕ್ಷದ ನಿತೀಶ್ ಕುಮಾರ್ ಅವರು ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.

‘12.30ಕ್ಕೆ ಸಭೆ ಆರಂಭವಾಗಲಿದೆ. ಸಭೆಯಲ್ಲಿ ಮುಂದಿನ ನಿರ್ಧಾರಗಳನ್ನು ಕೈಗೊಳ್ಳಲಾಗುವುದು’ ಎಂದು ನಿತೀಶ್ ಕುಮಾರ್ ತಿಳಿಸಿದ್ದಾರೆ.

ಎನ್‌ಡಿಎ ಮೈತ್ರಿಕೂಟದ ಪರ ಬಿಜೆಪಿಯು 74 ಸ್ಥಾನ ಗಳಿಸಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ಮಿತ್ರಪಕ್ಷ ಜೆಡಿಯುಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡಲು ಸಿದ್ಧವಾಗಿದೆ. ನಿತೀಶ್ ಕುಮಾರ್ ಅವರೇ ಬಿಹಾರದ ಮುಖ್ಯಮಂತ್ರಿಯಾಗಲಿದ್ದಾರೆ ಎಂಬುದನ್ನು ಪ್ರಧಾನಿ ನರೇಂದ್ರ ಮೋದಿಯೂ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರು ಈಗಾಗಲೇ ದೃಢಪಡಿಸಿದ್ದಾರೆ.

ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶ ನವೆಂಬರ್ 10ರಂದು ಪ್ರಕಟಗೊಂಡಿದ್ದು, ಎನ್‌ಡಿಎ ಮೈತ್ರಿಕೂಟ ಬಹುಮತ ಗಳಿಸಿತ್ತು. ಆರ್‌ಜೆಡಿ ನೇತೃತ್ವದ ಮಹಾಗಠಬಂಧನ 110 ಸ್ಥಾನಗಳನ್ನಷ್ಟೇ ಗಳಿಸಿದೆ. 75 ಸ್ಥಾನಗಳಲ್ಲಿ ಗೆಲುವು ಪಡೆಯವ ಮೂಲಕ ಆರ್‌ಜೆಡಿಯು ಏಕೈಕ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೆ, ಬಿಜೆಪಿ 74 ಹಾಗೂ ಜೆಡಿಯು 43 ಸ್ಥಾನ ಗಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.