ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಮಂಗಳವಾರ ಬಿಜೆಪಿ ನೇತೃತ್ವದ ಎನ್‌ಡಿಎ ಸಂಸದೀಯ ಪಕ್ಷದ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಸೆಪ್ಟೆಂಬರ್ 9ಕ್ಕೆ ನಿಗದಿಯಾಗಿರುವ ಉಪರಾಷ್ಟ್ರಪತಿ ಚುನಾವಣೆ ಘೋಷಣೆ ಬಳಿಕ ಮೈತ್ರಿಕೂಟದ ಸಭೆ ನಡೆಯಲಿದೆ.
ಆಗಸ್ಟ್ 7ರಂದು ಉಪರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭವಾಗುವ ಎರಡು ದಿನ ಮುನ್ನ ಎನ್‌ಡಿಎ ಸಭೆ ನಡೆಯುತ್ತಿದೆ.
ಆಗಸ್ಟ್ 21ಕ್ಕೆ ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.
ಮೈತ್ರಿಕೂಟದ ಈ ಸಭೆಯಲ್ಲಿ ಪಹಲ್ಗಾಮ್ ಭಯೋತ್ಪಾದಕ ದಾಳಿ ಹಾಗೂ ಆಪರೇಷನ್ ಸಿಂಧೂರ ಬಗ್ಗೆ ನರೇಂದ್ರ ಮೋದಿಯವರು ಸಂಸದರೊಂದಿಗೆ ಚರ್ಚೆ ನಡೆಸುವ ಸಾಧ್ಯತೆ ಇದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.