ADVERTISEMENT

ಎನ್‌ಡಿಎಗೆ ಬಹುಮತ: ಕಾದು ನೋಡಿ ಎಂದ ಆರ್‌ಜೆಡಿ

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2020, 6:53 IST
Last Updated 10 ನವೆಂಬರ್ 2020, 6:53 IST
ಬಿಜೆಪಿ-ಜೆಡಿ(ಯು) ಕಾರ್ಯಕರ್ತರು
ಬಿಜೆಪಿ-ಜೆಡಿ(ಯು) ಕಾರ್ಯಕರ್ತರು   

ಪಟ್ನಾ: ನಗರದ ಬಿಜೆಪಿ ಕಚೇರಿ ಎದುರು ಕಾರ್ಯಕರ್ತರು ಸಂಭ್ರಮಾಚರಣೆ ಆರಂಭಿಸಿದ್ದಾರೆ. ಆದರೆ ವಿರೋಧ ಪಕ್ಷಗಳ ನಾಯಕರು 'ಫಲಿತಾಂಶ ಪ್ರಕಟವಾಗಲು ಇನ್ನೂ ಸಮಯವಿದೆ. ಕಾದುನೋಡಿ' ಎಂದು ಕಿವಿಮಾತು ಹೇಳಿದ್ದಾರೆ.

ಆರಂಭದಲ್ಲಿ ಸಾಧಿಸಿದ್ದ ಮುನ್ನಡೆ ಕಾಪಾಡಿಕೊಳ್ಳಲು ಕಾಂಗ್ರೆಸ್ ವಿಫಲವಾಗಿದೆ. ಸ್ಪರ್ಧಿಸಿದ್ದ 70 ಕ್ಷೇತ್ರಗಳ ಪೈಕಿ ಕೇವಲ 20 ಕ್ಷೇತ್ರಗಳಲ್ಲಿ ಮಾತ್ರ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.

ಎಡಪಕ್ಷಗಳು ನಿರೀಕ್ಷೆಗೂ ಮೀರಿದ ಸಾಧನೆ ತೋರಿವೆ. ಸ್ಪರ್ಧಿಸಿದ್ದ 15 ಕ್ಷೇತ್ರಗಳ ಪೈಕಿ 12 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿವೆ.

ADVERTISEMENT

90 ಕ್ಷೇತ್ರಗಳಲ್ಲಿ ಗೆಲುವಿನ ಭರವಸೆ ಹುಟ್ಟಿಸಿದ್ದ ಆರ್‌ಜೆಡಿ ಕೇವಲ 65 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಮುನ್ನಡೆ-ಹಿನ್ನಡೆಯನ್ನೇ ಆಧರಿಸಿ ಚುನಾವಣಾ ಫಲಿತಾಂಶ ನಿರ್ಧರಿಸಲು ಆಗುವುದಿಲ್ಲ ಮತ ಎಣಿಕೆ ನಿಧಾನಗತಿಯಲ್ಲಿ ಸಾಗುತ್ತಿದೆ. ಕೋವಿಡ್ ಕಾರಣದಿಂದಾಗಿ ಚುನಾವಣಾ ಆಯೋಗವು ಮತಗಟ್ಟೆಗಳ ಸಂಖ್ಯೆಯನ್ನೂ ಹೆಚ್ಚಿಸಿತ್ತು. ಗ್ರಾಮೀಣ ಪ್ರದೇಶಗಳ ಮತ ಎಣಿಕೆ ಆರಂಭವಾದ ನಂತರ ಚಿತ್ರಣ ಬದಲಾಗಲಿದೆ ಎಂದು ವಿರೋಧ ಪಕ್ಷಗಳ ನಾಯಕರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.