ADVERTISEMENT

ಕರೂರು ಕಾಲ್ತುಳಿತ ದುರಂತ: ಹೇಮಾ ಮಾಲಿನಿ ನೇತೃತ್ವದ NDA ಸಂಸದರ ನಿಯೋಗ ಭೇಟಿ

ಪಿಟಿಐ
Published 30 ಸೆಪ್ಟೆಂಬರ್ 2025, 9:11 IST
Last Updated 30 ಸೆಪ್ಟೆಂಬರ್ 2025, 9:11 IST
<div class="paragraphs"><p>ನಟ ವಿಜಯ್‌ ಅವರು ಕರೂರು ಜಿಲ್ಲೆಯಲ್ಲಿ ನಡೆಸಿದ ರ್‍ಯಾಲಿಯಲ್ಲಿ ಸಾವಿರಾರು ಜನರು ಸೇರಿದ್ದರು</p></div>

ನಟ ವಿಜಯ್‌ ಅವರು ಕರೂರು ಜಿಲ್ಲೆಯಲ್ಲಿ ನಡೆಸಿದ ರ್‍ಯಾಲಿಯಲ್ಲಿ ಸಾವಿರಾರು ಜನರು ಸೇರಿದ್ದರು

   

ನವದೆಹಲಿ: ಬಿಜೆಪಿ ಸಂಸದೆ ಹೇಮಾ ಮಾಲಿನಿ ನೇತೃತ್ವದ ಎನ್‌ಡಿಎ ಸಂಸದರ ನಿಯೋಗವು ತಮಿಳುನಾಡಿನ ಕರೂರು ಜಿಲ್ಲೆಯಲ್ಲಿ ಕಾಲ್ತುಳಿತ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿದೆ.

ಕಾಲ್ತುಳಿತ ದುರಂತಕ್ಕೆ ಕಾರಣವೇನು ಎಂಬುದರ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿರುವ ಸಂಸದರ ನಿಯೋಗವು, ಘಟನೆಯಲ್ಲಿ ಮೃತಪಟ್ಟವರು ಮತ್ತು ಗಾಯಗೊಂಡವರ ಕುಟುಂಬಸ್ಥರೊಂದಿಗೆ ಮಾತುಕತೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.

ADVERTISEMENT

ಸಂಸದರ ನಿಯೋಗದಲ್ಲಿ ಶಿವಸೇನಾ ಸಂಸದ ಶ್ರೀಕಾಂತ್‌ ಶಿಂದೆ, ಟಿಡಿಪಿ ಸಂಸದ ಮಹೇಶ್ ಕುಮಾರ್ ಸೇರಿದಂತೆ ಬಿಜೆಪಿ ಸಂಸದರಾದ ಹೇಮಾ ಮಾಲಿನಿ, ಅಪರಾಜಿತಾ ಸಾರಂಗಿ, ರೇಖಾ ಶರ್ಮಾ, ಬ್ರಿಜ್‌ಲಾಲ್, ಅನುರಾಗ್ ಠಾಕೂರ್, ತೇಜಸ್ವಿ ಸೂರ್ಯ ಇದ್ದಾರೆ.

ಸೆಪ್ಟೆಂಬರ್ 27ರಂದು ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ, ನಟ ವಿಜಯ್‌ ಅವರು ಕರೂರಿನಲ್ಲಿ ನಡೆಸಿದ ರ್‍ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿತ್ತು. ದುರಂತದಲ್ಲಿ ಈವರೆಗೆ 41 ಮಂದಿ ಮೃತಪಟ್ಟಿದ್ದು, 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.