ADVERTISEMENT

NDA ಸಂಸದೀಯ ಪಕ್ಷದ ಸಭೆ: ಉಪರಾಷ್ಟ್ರಪತಿ ಅಭ್ಯರ್ಥಿ ನಿರ್ಧಾರ ಸಾಧ್ಯತೆ

ಪಿಟಿಐ
Published 4 ಆಗಸ್ಟ್ 2025, 15:39 IST
Last Updated 4 ಆಗಸ್ಟ್ 2025, 15:39 IST
ನರೇಂದ್ರ ಮೋದಿ
ನರೇಂದ್ರ ಮೋದಿ   

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಇಲ್ಲಿ ಎನ್‌ಡಿಎ ಮೈತ್ರಿಕೂಟದ ಸಂಸದೀಯ ಪಕ್ಷದ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ.

ಸೆಪ್ಟೆಂಬರ್‌ 9ಕ್ಕೆ ನಿಗದಿಯಾಗಿರುವ ಉಪರಾಷ್ಟ್ರಪತಿ ಚುನಾವಣೆ ಘೋಷಣೆಯಾದ ಬಳಿಕ ಈ ಸಭೆ ನಡೆಯುತ್ತಿದೆ.

ಆಗಸ್ಟ್‌ 7ರಿಂದ ಉಪರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಕೆಯಾಗಲಿದೆ. ಮುಂಗಾರು ಅಧಿವೇಶ ಮುಗಿಯುವ ವೇಳೆಗೆ ಉಪರಾಷ್ಟ್ರಪತಿ ಆಯ್ಕೆ ಮಾಡಬೇಕಿದ್ದು, ಈ ಹಿನ್ನೆಲೆ ಈ ಸಭೆ ಎನ್ನಲಾಗಿದೆ.

ADVERTISEMENT

ಮುಂಬರುವ ಬಿಹಾರ ವಿಧಾನಸಭೆ ಚುನಾವಣೆಗೆ ಮುನ್ನ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (SIR) ಕುರಿತು ಚರ್ಚೆ ನಡೆಸಬೇಕೆಂಬ ಪ್ರತಿಪಕ್ಷಗಳ ಬೇಡಿಕೆಯಿಂದಾಗಿ ಸಂಸತ್ತಿನಲ್ಲಿ ಗದ್ದಲ ಏರ್ಪಟ್ಟ ಹಿನ್ನೆಲೆ ಉಳಿದ ಚರ್ಚೆಗಳು ನಡೆದಿಲ್ಲ ಹೀಗಾಗಿ ಈ ಸಭೆ ಮಹತ್ವ ಪಡೆದುಕೊಂಡಿದೆ.

ಸೆಪ್ಟೆಂಬರ್ 9ರಂದು ಉಪರಾಷ್ಟ್ರಪತಿ ಚುನಾವಣೆ ನಡೆಯಲಿದೆ.

ಭಯೋತ್ಪಾದಕ ದಾಳಿಗೆ ಭಾರತ ನೀಡಿದ ದಿಟ್ಟ ಉತ್ತರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಂಸದೀಯ ಪಕ್ಷದ ಸಭೆಯಲ್ಲಿ ಸನ್ಮಾನಿಸುವ ಸಾಧ್ಯತೆ ಇದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.