ಮುಂಬೈ: ‘ಇಂಡಿಯಾ’ ಮೈತ್ರಿಕೂಟದ ಪಕ್ಷಗಳು ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮತ್ತು ಬಿಜೆಪಿಯನ್ನು ಸಂಘಟಿತವಾಗಿ ಎದುರಿಸಲು ಸಾಮಾಜಿಕ ಮಾಧ್ಯಮ ಕ್ರಿಯಾ ಯೋಜನೆ ಸಿದ್ಧಪಡಿಸುತ್ತಿವೆ.
ಆಡಳಿತ ಪಕ್ಷದ ವಿರುದ್ಧ ಸಮರ ಸಾರಲು ಎಲ್ಲ ಪಕ್ಷಗಳ ಸಂಪನ್ಮೂಲಗಳನ್ನು ಒಟ್ಟುಗೂಡಿಸುವ ಹಾಗೂ ಒಂದೇ ರೀತಿಯ ಕಂಟೆಂಟ್‌ಗಳನ್ನು ಸಿದ್ಧಪಡಿಸುವ ಕಾರ್ಯವೂ ನಡೆಯಲಿದೆ.
ಈ ಕುರಿತು ‘ಇಂಡಿಯಾ’ ಮೈತ್ರಿಕೂಟದ ಪಕ್ಷಗಳ ಸಾಮಾಜಿಕ ಮಾಧ್ಯಮ ವಿಭಾಗಗಳ ಸಂಯೋಜಕರು ಮತ್ತು ಮುಖ್ಯಸ್ಥರು ಮುಂಬೈನಲ್ಲಿ ಈ ವಾರಾಂತ್ಯದಲ್ಲಿ ಭೇಟಿಯಾಗಿ ಚರ್ಚಿಸಲಿದ್ದಾರೆ.
ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡುವ ವಿಷಯಗಳು ಮತ್ತು ಸಾರ್ವಜನಿಕರಿಗೆ ಏಕೀಕೃತವಾಗಿ ಈ ಸಂದೇಶಗಳ ರವಾನೆ ವಿಚಾರದಲ್ಲಿ ಪರಸ್ಪರ ಹೇಗೆ ಸಹಕರಿಸಬೇಕು ಮತ್ತು ಸಂಯೋಜಿಸಬೇಕು ಎಂಬುದರ ಕುರಿತು ಯೋಜನೆ ರೂಪಿಸಲಾಗುತ್ತದೆ. ಹ್ಯಾಷ್‌ಟ್ಯಾಗ್ ಮತ್ತು ಇತರ ಸಾಧನಗಳ ಆಯ್ಕೆ ಕುರಿತೂ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.