ನದಿಯಲ್ಲಿ ಎನ್‌ಡಿಆರ್‌ಎಫ್ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿರುವ ದೃಶ್ಯ
–ಪಿಟಿಐ ಚಿತ್ರ
ಮಹಾಕುಂಭ ನಗರ: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಮುಳುಗುತ್ತಿದ್ದ ದೋಣಿಯಿಂದ 17 ಭಕ್ತರನ್ನು ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ದೋಣಿಯೊಂದು ನಿಯಂತ್ರಣ ತಪ್ಪಿ ಗಂಗಾನದಿಯಲ್ಲಿ ಮುಳುಗಲು ಆರಂಭಿಸಿತ್ತು. ಭಕ್ತರು ಸಹಾಯಕ್ಕಾಗಿ ಕಿರುಚುತ್ತಿದ್ದರು. ಕೂಡಲೇ ಗಸ್ತು ತಿರುಗುತ್ತಿದ್ದ ಎನ್‌ಡಿಆರ್‌ಎಫ್ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಭಕ್ತರನ್ನು ರಕ್ಷಣೆ ಮಾಡಲಾಯಿತು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಒಂಬತ್ತು ಭಕ್ತರನ್ನು ಎನ್‌ಡಿಆರ್‌ಎಫ್ ಸಿಬ್ಬಂದಿ ರಕ್ಷಣೆ ಮಾಡಿದ್ದರೆ, ಎಸ್‌ಡಿಆರ್‌ಎಫ್ ಸಿಬ್ಬಂದಿ ಎಂಟು ಭಕ್ತರನ್ನು ರಕ್ಷಣೆ ಮಾಡಿದ್ದಾರೆ ಎಂದು ವರದಿಯಾಗಿದೆ.
‘ಪ್ರಯಾಗರಾಜ್‌ನ ತ್ರಿವೇಣಿ ಸಂಗಮದಲ್ಲಿ ನಡೆದಿರುವ ಮಹಾಕುಂಭಮೇಳಕ್ಕೆ 62 ಕೋಟಿ ಭಕ್ತರು ಬಂದಿದ್ದಾರೆ’ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ತಿಳಿಸಿದ್ದಾರೆ.
‘ನಿರ್ದಿಷ್ಟ ಅವಧಿಯಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮವೊಂದಕ್ಕೆ ಬೃಹತ್ ಸಂಖ್ಯೆಯ ಜನರು ಸೇರಿದ್ದು ಶತಮಾನದ ಅಪರೂಪದ ಘಟನೆಗಳಲ್ಲಿ ಒಂದಾಗಿದೆ’ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.