ನವದೆಹಲಿ: ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್ಡಿಆರ್ಎಫ್) ಟ್ವಿಟರ್ ಖಾತೆಯನ್ನು ಶನಿವಾರ ತಡರಾತ್ರಿ ಹ್ಯಾಕ್ ಮಾಡಲಾಗಿದೆ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ.
ತಾಂತ್ರಿಕ ತಜ್ಞರು ಈ ಕುರಿತು ಪರಿಶೀಲಿಸುತ್ತಿದ್ದು, ಎನ್ಡಿಆರ್ಎಫ್ ಖಾತೆಯನ್ನು ಶೀಘ್ರದಲ್ಲೇ ಮರುಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ.
ಇದನ್ನೂ ಓದಿ:ಗಣರಾಜ್ಯೋತ್ಸವ: ಗುಜರಾತ್ನಿಂದ 'ಬುಡಕಟ್ಟು ಜನಾಂಗದ ಹತ್ಯಾಕಾಂಡ'ದ ಸ್ತಬ್ಧಚಿತ್ರ
ಎನ್ಡಿಆರ್ಎಫ್ ಟ್ವಿಟರ್ ಖಾತೆಯಲ್ಲಿ ಈಗಾಗಲೇ ಪ್ರಕಟಿಸಿದ ಕೆಲವು ಸಂದೇಶಗಳು ಕಾಣಿಸುತ್ತಿಲ್ಲ ಎಂದು ವರದಿಯಾಗಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಎನ್ಡಿಆರ್ಎಫ್ ಮಹಾನಿರ್ದೇಶಕ ಅತುಲ್ ಕರ್ವಾಲ್, 'ಶನಿವಾರ ರಾತ್ರಿ ಎನ್ಡಿಆರ್ಎಫ್ ಖಾತೆ ಹ್ಯಾಕ್ ಆಗಿದೆ. ಈ ಬಗ್ಗೆ ಪರಿಶೀಲಿಸಲಾಗುತ್ತಿದೆ' ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.