ನವದೆಹಲಿ: ಸುಪ್ರೀಂ ಕೋರ್ಟ್‌ನಲ್ಲಿ 1,800 ಹಾಗೂ ದೇಶದ ವಿವಿಧ ಹೈಕೋರ್ಟ್‌ಗಳಲ್ಲಿ 1.43 ಲಕ್ಷ ನ್ಯಾಯಾಂಗ ನಿಂದನೆ ಪ್ರಕರಣಗಳು ವಿಚಾರಣೆ ಹಂತದಲ್ಲಿವೆ ಎಂದು ಕೇಂದ್ರ ಸರ್ಕಾರ ಶುಕ್ರವಾರ ಲೋಕಸಭೆಗೆ ಮಾಹಿತಿ ನೀಡಿದೆ.
ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿದ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್, ಮಾರ್ಚ್ 20ರ ವೇಳೆಗೆ 1,852 ನ್ಯಾಯಾಂಗ ನಿಂದನೆ ಪ್ರಕರಣಗಳು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇವೆ ಎಂದು ಹೇಳಿದ್ದಾರೆ.
ರಾಷ್ಟ್ರೀಯ ನ್ಯಾಯಾಂಗ ದತ್ತಾಂಶ ಜಾಲದಲ್ಲಿರುವ ಮಾಹಿತಿಯನ್ನು ಉಲ್ಲೇಖಿಸಿ ಉತ್ತರಿಸಿದ ಅವರು, ಮಾರ್ಚ್ 24ರ ವೇಳೆಗೆ 1,43,573 ನ್ಯಾಯಾಂಗ ನಿಂದನೆ ಪ್ರಕರಣಗಳು ವಿವಿಧ ಹೈಕೋರ್ಟ್‌ಗಳಲ್ಲಿ ಬಾಕಿ ಇವೆ ಎಂದು ಹೇಳಿದ್ದಾರೆ.
ನ್ಯಾಯಾಂಗ ನಿಂದನೆ ಪ್ರಕರಣಗಳಲ್ಲಿ ಕೋರ್ಟ್ ಆದೇಶ ಪಾಲಿಸದೇ ಇರಲು ಕಾರಣಗಳೇನು ಎನ್ನುವುದರ ದತ್ತಾಂಶ ಕೇಂದ್ರ ಸರ್ಕಾರದ ಬಳಿ ಇಲ್ಲ ಎಂದು ಮೇಘಾವಾಲ್ ತಿಳಿಸಿದ್ದಾರೆ.
ಕೇಂದ್ರ ಸರ್ಕಾರಕ್ಕೆ ಸಂಬಂಧಿಸಿದಂತೆ ಕೋರ್ಟ್ ಆದೇಶಗಳನ್ನು ಪಾಲಿಸುವ ಕರ್ತವ್ಯ ಆಯಾ ಇಲಾಖೆಯ ಆಡಳಿತ ಹಾಗೂ ಸಚಿವರದ್ದು ಎಂದು ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.