ಮುಂಬೈ: ನಟ ಸೈಫ್ ಅಲಿ ಖಾನ್ ಅವರ ಮೇಲೆ ದಾಳಿ ನಡೆಸಿದ ಪ್ರಕರಣದ ಸಂಬಂಧ, ಪೊಲೀಸರು ದೋಷಾರೋಪ ಪಟ್ಟಿಯನ್ನು ಮುಂಬೈ ಕೋರ್ಟ್‌ಗೆ ಸಲ್ಲಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದರು.
ಬಾಂದ್ರಾ ಪೊಲೀಸರು ಸಲ್ಲಿಸಿರುವ ದೋಷಾರೋಪ ಪಟ್ಟಿಯು ಆರೋಪಿ, ಬಾಂಗ್ಲಾ ಪ್ರಜೆ ಮಹಮ್ಮದ್ ಶರೀಫುಲ್ ಇಸ್ಲಾಂ ವಿರುದ್ಧದ ಸಾಕ್ಷ್ಯಗಳನ್ನು ಒಳಗೊಂಡಿದೆ ಎಂದು ತಿಳಿಸಿದರು.
ಜನವರಿ 16ರಂದು ಬಾಂದ್ರಾ ಪ್ರದೇಶದಲ್ಲಿರುವ ಖಾನ್ ಅವರ ನಿವಾಸದ ಒಳನುಸುಳಿದ್ದ ಶರೀಫುಲ್ ಇಸ್ಲಾಂ, ಖಾನ್ ಅವರಿಗೆ ಹಲವು ಬಾರಿ ಚಾಕುವಿನಿಂದ ಇರಿದು ಪರಾರಿಯಾಗಿದ್ದ. ಜನವರಿ 19ರಂದು ಆರೋಪಿಯನ್ನು ಪೊಲೀಸರು ಬಂಧಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.