ADVERTISEMENT

ನೀಟ್‌ ಪರೀಕ್ಷೆ: ಅರ್ಹತೆ ಪಡೆದವರಲ್ಲಿ ಉತ್ತರ ಪ್ರದೇಶದ ಅಭ್ಯರ್ಥಿಗಳೇ ಹೆಚ್ಚು

ಪಿಟಿಐ
Published 18 ಅಕ್ಟೋಬರ್ 2020, 11:04 IST
Last Updated 18 ಅಕ್ಟೋಬರ್ 2020, 11:04 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(ನೀಟ್) ಫಲಿತಾಂಶ ಶುಕ್ರವಾರ ಪ್ರಕಟವಾಗಿದ್ದು, ಈ ವರ್ಷ ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರದ ಹೆಚ್ಚು ಅಭ್ಯರ್ಥಿಗಳು ನೀಟ್‌ ಪರೀಕ್ಷೆಯಲ್ಲಿ ಅರ್ಹತೆ ಪಡೆದಿದ್ದಾರೆ ಎಂಬುದು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ(ಎನ್‌ಟಿಎ) ಅಂಕಿಅಂಶದಿಂದ ತಿಳಿದುಬಂದಿದೆ.

13.66 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ನೀಟ್‌ ಪರೀಕ್ಷೆಯನ್ನು ಬರೆದಿದ್ದರು. ಇದರಲ್ಲಿ 7.7 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಅರ್ಹತೆಯನ್ನು ಪಡೆದಿದ್ದಾರೆ. ಉತ್ತರ ಪ್ರದೇಶದ 88,889 ಅಭ್ಯರ್ಥಿಗಳು ನೀಟ್‌ ಪರೀಕ್ಷೆಯಲ್ಲಿ ಅರ್ಹತೆ ಪಡೆಯುವ ಮೂಲಕ ಮೊದಲ ಸ್ಥಾನದಲ್ಲಿದ್ದು, 79,974 ಅಭ್ಯರ್ಥಿಗಳು ಅರ್ಹತೆ ಪಡೆದಿರುವ ಮಹಾರಾಷ್ಟ್ರ ಎರಡನೇ ಸ್ಥಾನವನ್ನು ಪಡೆದಿದೆ ಎಂದು ಅಧಿಕಾರಿಗಳು ತಿಳಿಸಿದರು.

ಇನ್ನು ರಾಜಸ್ಥಾನ (65,758) ಕೇರಳ (59,404), ಕರ್ನಾಟಕ (55,009) ಅಭ್ಯರ್ಥಿಗಳು ನೀಟ್‌ ಪರೀಕ್ಷೆಯಲ್ಲಿ ಅರ್ಹತೆ ಪಡೆದಿದ್ದಾರೆ. ಈ ರಾಜ್ಯಗಳು ಕ್ರಮವಾಗಿ ಮೂರು, ನಾಲ್ಕು ಮತ್ತು ಐದನೇ ಸ್ಥಾನವನ್ನು ಪಡೆದಿವೆ. ಅಲ್ಲದೇ ದೆಹಲಿಯ 23,554 ಮತ್ತು ಹರಿಯಾಣದ 22,395 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ.

ಪರೀಕ್ಷೆಗೆ ಅರ್ಹತೆ ಪಡೆದವರಲ್ಲಿ ಯುವತಿಯರ ಸಂಖ್ಯೆ ಹೆಚ್ಚಾಗಿದೆ. ಈ ವರ್ಷ 4.27 ಲಕ್ಷ ಯುವತಿಯರು ಮತ್ತು 3.43 ಲಕ್ಷ ಪುರುಷರು ಅರ್ಹತೆ ಪಡೆದಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.